ಬೀದರ್: ಜಿಲ್ಲೆಯಲ್ಲಿ ಸೋಮವಾರ 69 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕೋವಿಡ್ ಸೋಂಕಿತ ಸಕ್ರಿಯ ಪ್ರಕರಣಗಳ ಸಂಖ್ಯೆ 1017ಕ್ಕೆ ತಲುಪಿದೆ.
ಬೀದರ್ ತಾಲ್ಲೂಕಿನಲ್ಲಿ ಅತಿ ಹೆಚ್ಚು 25 ಜನರಿಗೆ ಸೋಂಕು ದೃಢಪಟ್ಟಿದೆ. ಭಾಲ್ಕಿ ತಾಲ್ಲೂಕಿನಲ್ಲಿ 20, ಬಸವಕಲ್ಯಾಣ ತಾಲ್ಲೂಕಿನಲ್ಲಿ 14, ಔರಾದ್ ತಾಲ್ಲೂಕಿನಲ್ಲಿ 5 ಹಾಗೂ ಹುಮನಾಬಾದ್ ತಾಲ್ಲೂಕಿನಲ್ಲಿ 4 ಜನರಿಗೆ ಕೋವಿಡ್ ಸೋಂಕು ತಗುಲಿದೆ.
ಈವರೆಗೆ 57,397 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದೆ. ಕೋವಿಡ್ ಸೋಂಕಿತರ ಸಂಖ್ಯೆ 3,646ಕ್ಕೆ ಹೆಚ್ಚಿದೆ. 53,384 ಮಂದಿಯ ವರದಿ ನೆಗೆಟಿವ್ ಬಂದಿದೆ. ಇನ್ನೂ 367 ಮಂದಿಯ ವರದಿ ಬರಬೇಕಿದೆ. ಕೋವಿಡ್ ಕೇರ್ ಸೆಂಟರ್ ಹಾಗೂ ಕೋವಿಡ್ ಆಸ್ಪತ್ರೆಯಿಂದ ಭಾನುವಾರ 12 ಮಂದಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 2517 ಮಂದಿ ಗುಣಮುಖರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.