ADVERTISEMENT

ಬೀದರ್‌: ಒಬ್ಬರಿಗೆ ಮಾತ್ರ ಸೋಂಕು

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 15:22 IST
Last Updated 23 ಜೂನ್ 2021, 15:22 IST

ಬೀದರ್‌: ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಬುಧವಾರ ಒಬ್ಬರಿಗೆ ಮಾತ್ರ ಸೋಂಕು ತಗುಲಿರುವುದು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಈವರೆಗೆ 24,134 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 23,692 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ 48ಕ್ಕೆ ಕುಸಿದಿದೆ. ಆರೋಗ್ಯ ಇಲಾಖೆಯ ದಾಖಲೆ ಪ್ರಕಾರ ಜಿಲ್ಲೆಯಲ್ಲಿ ಈವರೆಗೆ 390 ಜನ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಜಿಲ್ಲಾಡಳಿತ ಜಿಲ್ಲೆಯಲ್ಲಿ ಕೋವಿಡ್‌ ನಿಯಮಗಳನ್ನು ಬಿಗಿಗೊಳಿಸುವ ಜತೆಗೆ ಕೋವಿಡ್‌ ಲಸಿಕೆ ಕೊಡುವ ಕಾರ್ಯಕ್ಕೂ ಒತ್ತು ಕೊಟ್ಟಿದೆ. ಯೋಗ ದಿನದಂದು ಜಿಲ್ಲೆಯ 32,226 ಜನರಿಗೆ ಲಸಿಕೆ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.