ಕಮಲನಗರದಲ್ಲಿ ಬೈಕ್ ರ್‍ಯಾಲಿ ನಡೆಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು
ಕಮಲನಗರ (ಬೀದರ್ ಜಿಲ್ಲೆ): ಪಟ್ಟಣ ಹೊರವಲಯದ ರಾಂಪೂರ ರಸ್ತೆಯಲ್ಲಿರುವ ಶೆಡ್‌ವೊಂದರಲ್ಲಿ ಭಾನುವಾರ ಗೋಹತ್ಯೆ ಮಾಡಿರುವುದನ್ನು ವಿರೋಧಿಸಿ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕಮಲನಗರ ಬಂದ್ ಮಾಡಿದರು.
ಪಟ್ಟಣದಲ್ಲಿ ಬೈಕ್ ರ್‍ಯಾಲಿ ನಡೆಸಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿ, ಅಲ್ಲಮಪ್ರಭು ವೃತ್ತದಲ್ಲಿ ಟೈರ್ ಸುಟ್ಟು ಆಕ್ರೋಶ ಹೊರಹಾಕಿದರು.
ಗೋವಿನ ಹತ್ಯೆ ಮಾಡಿದ ವಿಷಯ ಕಾಡ್ಗಿಚ್ಚಿನಂತೆ ಹರಡಿತು. ಕೆಲವೇ ನಿಮಿಷಗಳಲ್ಲಿ ಯುವಕರು ಜಮಾಯಿಸಿ ಘಟನೆ ಖಂಡಿಸಿದರು. ಘಟನೆಗೆ ಕಾರಣರಾದವರ ಬಂಧನಕ್ಕೆ ಒತ್ತಾಯಿಸಿದರು.
ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಕತ್ತರಿಸಿದ ಗೋವಿನ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನಾ ಸ್ಥಳದಿಂದ ನಾಲ್ಕೈದು ಆಕಳುಗಳನ್ನೂ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಕೊಟ್ಟಿದ್ದು, ತನಿಖೆ ಪ್ರಗತಿಯಲ್ಲಿದೆ. ಇನ್ನಷ್ಟೇ ಪ್ರಕರಣ ದಾಖಲಾಗಬೇಕಿದೆ.
ಪಟ್ಟಣದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಘಟನಾ ಸ್ಥಳದಲ್ಲಿ ಪೊಲೀಸರು
ಕಮಲನಗರದ ಅಲ್ಲಮಪ್ರಭು ವೃತ್ತದಲ್ಲಿ ಟೈರ್ ಸುಟ್ಟು ಆಕ್ರೋಶ ಹೊರಹಾಕಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು
ಶೆಡ್ ಬಳಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.