ADVERTISEMENT

ಕಮಲನಗರದಲ್ಲಿ ಗೋಹತ್ಯೆ: ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 8 ಜೂನ್ 2025, 15:50 IST
Last Updated 8 ಜೂನ್ 2025, 15:50 IST
   

ಕಮಲನಗರ (ಬೀದರ್ ಜಿಲ್ಲೆ): ಪಟ್ಟಣ ಹೊರವಲಯದ ರಾಂಪೂರ ರಸ್ತೆಯಲ್ಲಿರುವ ಶೆಡ್ ವೊಂದರಲ್ಲಿ ಭಾನುವಾರ ನಡೆದ ಗೋಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಎಮ್ಮೆ ಮತ್ತು ನಾಲ್ಕು ಕರುಗಳನ್ನು ವಶಕ್ಕೆ ಪಡೆದು ಗೋಶಾಲೆಗೆ ಸಾಗಿಸಿದ್ದಾರೆ.

ಘಟನೆ ಖಂಡಿಸಿ ಬಜರಂಗ ದಳ, ವಿಶ್ವ ಹಿಂದೂ ಪರಿಷತ್‌ ಹಾಗೂ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿಸಿದರು. ರಸ್ತೆ ಮೇಲೆ ಟೈರ್‌ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ವಾಹನದಲ್ಲಿ ಗೋವಿನ ಕಳೇಬರವನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಅಂತ್ಯಕ್ರಿಯೆ ಮಾಡಿದರು.

‘ಶೆಡ್‌ವೊಂದರಲ್ಲಿ ಗೋವಿನ ಹತ್ಯೆಯಾಗಿದ್ದು, ವಿಷಯ ಗೊತ್ತಾಗುತ್ತಿದ್ದಂತೆ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳ ಬಂಧನದ ಬಳಿಕವೂ ಪ್ರತಿಭಟನೆ ನಡೆಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.