ADVERTISEMENT

ಅಕ್ರಮವಾಗಿ ಬೆಳೆದ ಗಾಂಜಾ ಗಿಡ ಜಪ್ತಿ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 13:41 IST
Last Updated 14 ಸೆಪ್ಟೆಂಬರ್ 2022, 13:41 IST

ಚಿಟಗುಪ್ಪ: ತಾಲ್ಲೂಕಿನ ಕಠಳ್ಳಿ ಗ್ರಾಮದ ದಶರಥ ಸೈಬಣ್ಣ ಸಿರಗೇಕರ (50) ಎಂಬುವರ ಹೊಲದಲ್ಲಿ ಅಕ್ರಮವಾಗಿ ಬೆಳೆದ ₹17,250 ಮೌಲ್ಯದ ಗಾಂಜಾ ಗಿಡಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಮಹೇಂದ್ರಕುಮಾರ್‌ ನೇತೃತ್ವದ ತಂಡ ದಾಳಿ ನಡೆಸಿದೆ.

ಸರ್ವೇ ನಂಬರ್ 5ರ ಒಂದು ಎಕರೆ ಕಬ್ಬಿನ ತೋಟದ ಒಳಗಡೆ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.