ADVERTISEMENT

ಬೀದರ್ ಜಿಲ್ಲೆಯಲ್ಲಿ ಬೆಳೆ ಹಾನಿ: ₹ 57 ಕೋಟಿ ಪರಿಹಾರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2021, 15:38 IST
Last Updated 11 ಡಿಸೆಂಬರ್ 2021, 15:38 IST
ಭಗವಂತ ಖೂಬಾ
ಭಗವಂತ ಖೂಬಾ   

ಬೀದರ್: ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಸುರಿದ ಮಳೆಯಿಂದ ಬೆಳೆ ಹಾನಿಗೊಳಗಾದ ಜಿಲ್ಲೆಯ 99,690 ರೈತರ ಖಾತೆಗೆ ಸರ್ಕಾರ ₹ 57.55 ಕೋಟಿ ಪರಿಹಾರ ಜಮಾ ಮಾಡಿದೆ ಎಂದು ಕೇಂದ್ರ ರಸಗೊಬ್ಬರ ಹಾಗೂ ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ಅಡಿಯಲ್ಲಿ ಕೆಲವೇ ದಿನಗಳಲ್ಲಿ ಇನ್ನೂ 20 ರಿಂದ 25 ಸಾವಿರ ರೈತರ ಖಾತೆಗೆ ಪರಿಹಾರ ಜಮಾ ಆಗಲಿದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಮಳೆಯಿಂದ ಕುಸಿದಿದ್ದ 450 ಮನೆಗಳ ಮಾಲೀಕರಿಗೆ ಪರಿಹಾರ ವಿತರಣೆಗಾಗಿ ಎಸ್‍ಡಿಆರ್‍ಎಫ್ ಅಡಿಯಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರರ ಖಾತೆಗೆ ಒಟ್ಟು ₹ 2.26 ಕೋಟಿ ಜಮಾ ಆಗಿದೆ. ವಾರದೊಳಗೆ ಮನೆಗಳ ಮಾಲೀಕರ ಖಾತೆಗಳಿಗೆ ಪರಿಹಾರ ಜಮೆ ಆಗಲಿದೆ. ಸರ್ಕಾರ, ರೈತರು ಹಾಗೂ ಸಂತ್ರಸ್ತರೊಂದಿಗೆ ಇದೆ ಎಂದು ತಿಳಿಸಿದ್ದಾರೆ.

ADVERTISEMENT

ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಸಹಕಾರ ನೀಡಲಿವೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.