ADVERTISEMENT

ಬೆಳೆ ಹಾನಿ ಪರಿಶೀಲಿಸಿದ ಶೈಲೇಂದ್ರ ಬೆಲ್ದಾಳೆ

ಪರಿಹಾರ ದೊರಕಿಸಿಕೊಡಲು ಪ್ರಯತ್ನ: ಭರವಸೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 9:58 IST
Last Updated 21 ಮಾರ್ಚ್ 2023, 9:58 IST
ಬೀದರ್ ತಾಲ್ಲೂಕಿನ ಮಲ್ಕಾಪುರದಲ್ಲಿ ಆಲಿಕಲ್ಲು ಮಳೆಯಿಂದ ಈರುಳ್ಳಿ ಬೆಳೆ ಹಾನಿಯಾಗಿರುವುದನ್ನು ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ ವೀಕ್ಷಿಸಿದರು
ಬೀದರ್ ತಾಲ್ಲೂಕಿನ ಮಲ್ಕಾಪುರದಲ್ಲಿ ಆಲಿಕಲ್ಲು ಮಳೆಯಿಂದ ಈರುಳ್ಳಿ ಬೆಳೆ ಹಾನಿಯಾಗಿರುವುದನ್ನು ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ ವೀಕ್ಷಿಸಿದರು   

ಜನವಾಡ: ಆಲಿಕಲ್ಲು ಮಳೆಯಿಂದ ಬೆಳೆ ಹಾನಿಗೀಡಾದ ಬೀದರ್ ತಾಲ್ಲೂಕಿನ ಸುಲ್ತಾನಪುರ ಹಾಗೂ ಮಲ್ಕಾಪುರ ಗ್ರಾಮದ ಹೊಲಗಳಿಗೆ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲಿಸಿದರು.

ಜೋಳ, ಈರುಳ್ಳಿ, ಕಡಲೆ, ಕಲ್ಲಂಗಡಿ, ಹೂ ಕೋಸು ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಿರುವ ಕುರಿತು ರೈತರು ಮಾಹಿತಿ ನೀಡಿದರು.

ಬೆಳೆ ಹಾನಿಯಾದ ರೈತರ ಹೊಲಗಳ ಸಮೀಕ್ಷೆ ನಡೆಸಿ, ಪರಿಹಾರಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ವಿಷಯವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು, ರೈತರಿಗೆ ಯೋಗ್ಯ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಪ್ರಮುಖರಾದ ಚನ್ನಪ್ಪ ಗೌರಶೆಟ್ಟಿ, ಬಸವರಾಜ ಹಿಲಾಲಪುರ, ಶಿವು ಸುಲ್ತಾನಪುರೆ, ಸಂಗಯ್ಯ ಸ್ವಾಮಿ, ಬಸವರಾಜ ಹೆಡ್ಡಿ, ಅನಿಲ್ ಮೇಲ್ದೊಡ್ಡಿ, ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.