ಬೀದರ್: ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದ ರೈತರು ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಫೋಟ ಹಾಗೂ ಗುಡುಗು-ಮಿಂಚುಗಳಿಂದ ಸಂಭವಿಸುವ ಬೆಂಕಿ ಅವಘಡದಿಂದ ಉಂಟಾಗುವ ನಷ್ಟಕ್ಕೆ ಪರಿಹಾರ ಪಡೆಯಬಹುದು ಎಂದು ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ತಿಳಿಸಿದ್ದಾರೆ.
ಪ್ರಕೃತಿ ವಿಕೋಪಗಳಿಂದ ನಷ್ಟ ಉಂಟಾದರೆ ರೈತರು ನೇರವಾಗಿ ಟೋಲ್ ಫ್ರೀ ಸಂಖ್ಯೆ 1800-200-5142 ಮತ್ತು 1800-267-4030, ಯೂನಿವರ್ಸಲ್ ಸೋಂಪೊ ಜನರಲ್ ಇನ್ಶೂರೆನ್ಸ್ ಕಂಪನಿ ತಾಲ್ಲೂಕುವಾರು ನೇಮಕ ಮಾಡಿರುವ ಪ್ರತಿನಿಧಿಗೆ ಕರೆ ಮಾಡಿ ಅಥವಾ ವೆಬ್‍ಸೈಟ್ https://login.universalsompo.in/CROP_CLAIM_WEBSITE/Search_ApplicationWise.apax ನಲ್ಲಿ 72 ಗಂಟೆಗಳ ಒಳಗೆ ದೂರು ದಾಖಲಿಸಬಹುದು. ಕೃಷಿ ಸಹಾಯಕ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರವನ್ನೂ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.