ADVERTISEMENT

ದಲಿತ ವಿದ್ಯಾರ್ಥಿಗಳ ಸಂಪೂರ್ಣ ಶುಲ್ಕ ಭರಿಸಿ: ದಲಿತ ವಿದ್ಯಾರ್ಥಿ ಪರಿಷತ್‌

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2025, 16:27 IST
Last Updated 5 ಮಾರ್ಚ್ 2025, 16:27 IST
ದಲಿತ ವಿದ್ಯಾರ್ಥಿ ಪರಿಷತ್‌ ಪದಾಧಿಕಾರಿಗಳು ಬೀದರ್‌ನಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಮನವಿ ಪತ್ರ ಸಲ್ಲಿಸಿದರು
ದಲಿತ ವಿದ್ಯಾರ್ಥಿ ಪರಿಷತ್‌ ಪದಾಧಿಕಾರಿಗಳು ಬೀದರ್‌ನಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಬೀದರ್‌: ಮ್ಯಾನೇಜ್‌ಮೆಂಟ್‌ ಕೋಟಾದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ದಲಿತ ವಿದ್ಯಾರ್ಥಿಗಳ ಸಂಪೂರ್ಣ ಶುಲ್ಕ ರಾಜ್ಯ ಸರ್ಕಾರವೇ ಭರಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್‌ ಆಗ್ರಹಿಸಿದೆ.

ಈ ಸಂಬಂಧ ಪರಿಷತ್‌ ಪದಾಧಿಕಾರಿಗಳು ಮುಖ್ಯಮಂತ್ರಿಯವರ ಹೆಸರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಬುಧವಾರ ಜಿಲ್ಲಾಧಿಕಾರಿಗೆ ಸಲ್ಲಿಸಿ ಒತ್ತಾಯಿಸಿದರು.

ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ಶಾಲೆಗಳು ಮತ್ತು ವಸತಿ ನಿಲಯಗಳನ್ನು ಹೆಚ್ಚಿಸಬೇಕು. ರಾಜ್ಯದಾದ್ಯಂತ ಸರ್ಕಾರಿ ವಸತಿ ನಿಲಯಗಳಲ್ಲಿ ಆಹಾರಕ್ಕೆ ಸಂಬಂಧಿಸಿದಂತೆ ಅನೇಕು ದೂರುಗಳು ಬರುತ್ತಿವೆ. ಕಳಪೆ ಆಹಾರ ಪೂರೈಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ವಸತಿ ನಿಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಕೊಡಬೇಕು. ಪಠ್ಯ ಪುಸ್ತಕ ಒದಗಿಸಬೇಕು. ಹೈಟೆಕ್ ಗ್ರಂಥಾಲಯಗಳನ್ನು ಪ್ರಾರಂಭಿಸಬೇಕು. ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ 2 ರಿಂದ 3 ಸರ್ಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳನ್ನು ಪ್ರಾರಂಭಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಹೈಟೆಕ್‌ ಮತ್ತು ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು. ಪದವಿ ವಿದ್ಯಾರ್ಥಿಗಳಿಗೆ ₹50 ಸಾವಿರ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ₹1 ಲಕ್ಷ ವಿದ್ಯಾರ್ಥಿ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಪರಿಷತ್‌ ಜಿಲ್ಲಾ ಸಂಚಾಲಕ ಸಂದೀಪ ಕಾಂಟೆ, ಜಿಲ್ಲಾ ಸಂಪರ್ಕ ಕಾರ್ಯದರ್ಶಿ ಸೈನೀಲ ಬಂಧು,  ಜಿಲ್ಲಾ ಸಂಘಟನಾ ಸಂಚಾಲಕ ಸಂದೀಪ ವಾಲದೊಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಮಾಲೆ, ತಾಲ್ಲೂಕು ಸಂಚಾಲಕರಾದ ಅಮರನಾಥ ಹುಡಗೆ, ಆನಂದ ಕಾಂಬಳೆ, ಮಹದೇವ, ಸುದೀಪ ಮೇಟಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.