ADVERTISEMENT

ಬೀದರ್: ಎಸ್‌ಸಿ, ಎಸ್‌ಟಿ ಮನವಿ ತಕ್ಷಣ ಇತ್ಯರ್ಥಕ್ಕೆ ಡಿಸಿ ಸಲಹೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 15:39 IST
Last Updated 26 ಅಕ್ಟೋಬರ್ 2024, 15:39 IST
ಬೀದರ್‌ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಜನರ ಕುಂದು ಕೊರತೆ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿ.ಪಂ. ಸಿಇಒ ಡಾ.ಗಿರೀಶ್ ಬದೋಲೆ, ಹಿರಿಯ ಅಧಿಕಾರಿಗಳು ಹಾಜರಿದ್ದರು 
ಬೀದರ್‌ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಜನರ ಕುಂದು ಕೊರತೆ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿ.ಪಂ. ಸಿಇಒ ಡಾ.ಗಿರೀಶ್ ಬದೋಲೆ, ಹಿರಿಯ ಅಧಿಕಾರಿಗಳು ಹಾಜರಿದ್ದರು    

ಬೀದರ್: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸಂಬಂಧಿಸಿದ ದೂರು ಹಾಗೂ ಮನವಿ ಬಂದರೆ ಸಂಬಂಧಿತರು ತಕ್ಷಣ ಇತ್ಯರ್ಥ ಪಡಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರ ಕುಂದು ಕೊರತೆ ವಿಚಾರಣೆ ಸಭೆಯಲ್ಲಿ ಅವರು ಮಾತನಾಡಿದರು.

‘ಸ್ಮಶಾನ ಭೂಮಿ ಮಂಜೂರು, ಭವನಗಳ ನಿರ್ಮಾಣ, ಪರಿಶಿಷ್ಟ ಜಾತಿ ಕಾಲೊನಿಗಳಲ್ಲಿ ಮೂಲಸೌಕರ್ಯ, ವಿದ್ಯಾರ್ಥಿ ವೇತನ, ಸುಳ್ಳು ಜಾತಿ ಪ್ರಕರಣ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಬಂದಿರುವ ಮನವಿಗಳಿಗೆ ಸ್ಪಂದಿಸುವಂತೆ ತಿಳಿಸಿದರು.

ADVERTISEMENT

ಸಭೆಯಲ್ಲಿ ಸುಮಾರು 200ಕ್ಕೂ ಹೆಚ್ಚು ವಿವಿಧ ದಲಿತ ಸಂಘಟನೆಯ ಮುಖಂಡರುಗಳು, ಸಾರ್ವಜನಿಕರು ಆಗಮಿಸಿ ತಮ್ಮ ಕುಂದು ಕೊರತೆ, ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕೆಲವು ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು. ಕೆಲ ಸಮಸ್ಯೆ ಪರಿಹಾರಕ್ಕೆ ಸಂಬಂಧಪಟ್ಟ ಇಲಾಖೆಗೆ ವರ್ಗಾಯಿಸಲು ಸೂಚಿಸಿದರು.

ಬೀದರ್‌ ಸಹಾಯಕ ಆಯುಕ್ತ ಶಕೀಲ್ ಅಹ್ಮದ, ಬಸವಕಲ್ಯಾಣ ಸಹಾಯಕ ಆಯುಕ್ತ ಮುಕುಲ್ ಜೈನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ್ ಮೇಘಣ್ಣನವರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಸಿಂಧು ಎಚ್.ಎಸ್. ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಶಿವಮಾನಪ್ಪ ಹಾಜರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.