ADVERTISEMENT

ಡಿಸಿಸಿ ಬ್ಯಾಂಕ್ ಶಾಖೆ ನೂತನ ಕಟ್ಟಡ ಉದ್ಘಾಟನೆ

ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಬ್ಯಾಂಕ್ ಬದ್ಧ: ಉಮಾಕಾಂತ ನಾಗಮಾರಪಳ್ಳಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2022, 16:01 IST
Last Updated 13 ಆಗಸ್ಟ್ 2022, 16:01 IST
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರು ಔರಾದ್ ತಾಲ್ಲೂಕಿನ ವಡಗಾಂವ್ (ದೇ) ಗ್ರಾಮದಲ್ಲಿ ಬ್ಯಾಂಕ್‍ನ ಶಾಖೆಯ ನೂತನ ಕಟ್ಟಡವನ್ನು ಉದ್ಘಾಟಿಸಿದರು
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರು ಔರಾದ್ ತಾಲ್ಲೂಕಿನ ವಡಗಾಂವ್ (ದೇ) ಗ್ರಾಮದಲ್ಲಿ ಬ್ಯಾಂಕ್‍ನ ಶಾಖೆಯ ನೂತನ ಕಟ್ಟಡವನ್ನು ಉದ್ಘಾಟಿಸಿದರು   

ಔರಾದ್: ತಾಲ್ಲೂಕಿನ ವಡಗಾಂವ (ದೇ) ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ಶಾಖೆಯ ನೂತನ ಕಟ್ಟಡವನ್ನು ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಶನಿವಾರ ಉದ್ಘಾಟಿಸಿದರು.

ಡಿಸಿಸಿ ಬ್ಯಾಂಕ್ ಶತಮಾನದ ಸಂಭ್ರಮದಲ್ಲಿದೆ. ಬೇರೆ ಬ್ಯಾಂಕ್‍ಗಳ ಪೈಪೋಟಿ ಸಮರ್ಥವಾಗಿ ಎದುರಿಸುವುದರೊಂದಿಗೆ ಜತೆಗೆ ಗ್ರಾಹಕರಿಗೆ ಅತ್ಯಾಧುನಿಕ ಬ್ಯಾಂಕಿಂಗ್ ಸೌಲಭ್ಯಗಳನ್ನು ಒದಗಿಸುತ್ತಿದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ ಎಂದು ಅವರು ಹೇಳಿದರು.

ಸಾಲ ವಿತರಣೆ, ವಸೂಲಾತಿ ಜತೆಗೆ ಬ್ಯಾಂಕ್ ರೈತರ ಹಿತರಕ್ಷಣೆಯನ್ನೂ ಮಾಡುತ್ತಿದೆ. ರೈತ ಕುಟುಂಬಗಳನ್ನು ವೈಯಕ್ತಿಕ ಅಪಘಾತ ವಿಮಾ ಯೋಜನೆಯಲ್ಲಿ ತೊಡಗಿಸಿದೆ. ಸ್ವಸಹಾಯ ಗುಂಪುಗಳ ಸದಸ್ಯರ ಸಾಲಕ್ಕೆ ಆರ್ಥಿಕ ಭದ್ರತೆ ದೊರಕಲು ವಿಮೆ ಸೌಲಭ್ಯ ಕಲ್ಪಿಸಿದೆ ಎಂದು ತಿಳಿಸಿದರು.

ADVERTISEMENT

ಬ್ಯಾಂಕ್ ಜಿಲ್ಲೆಯ ಜನರ ಆರ್ಥಿಕ ಅಭಿವೃದ್ಧಿಗೆ ಕಂಕಣಬದ್ಧವಾಗಿದೆ.

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನೋಂದಣಿಯಲ್ಲಿ 2016 ರಿಂದಲೂ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದರು.

ಕಳೆದ ವರ್ಷ ಬ್ಯಾಂಕ್ 16,915 ಸ್ವಸಹಾಯ ಗುಂಪುಗಳಿಗೆ 507 ಕೋಟಿ ಸಾಲ ವಿತರಿಸಿದೆ. ಪ್ರಸಕ್ತ ಸಾಲಿನಲ್ಲಿ ಸಾವಿರ ಕೋಟಿ ರೂಪಾಯಿ ಸಾಲ ವಿತರಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.

ಪಿಕೆಪಿಎಸ್ ಅಧ್ಯಕ್ಷ ಬಸವರಾಜ ದೇಶಮುಖ ಅವರನ್ನು ಸನ್ಮಾನಿಸಲಾಯಿತು.

ಭಾರತೀಯ ಜೀವ ವಿಮಾ ನಿಗಮದ ಹಿರಿಯ ವ್ಯವಸ್ಥಾಪಕ ಸೈಯದ್ ಪೀರ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಬಸವರಾಜ ಹೆಬ್ಬಾಳೆ, ಜಗನ್ನಾಥ ರೆಡ್ಡಿ, ಶರಣಪ್ಪ ಕನ್ನಾಳೆ, ಅಬ್ದುಲ್ ಸಲೀಮೊದ್ದಿನ್, ಬಸವರಾಜ ಗೌಣಿ, ಶಿವಶರಣಪ್ಪ ತಗಾರೆ, ಪರಮೇಶ್ವರ ಮುಗಟೆ, ಹಣಮಂತರಾವ್ ಪಾಟೀಲ, ಸಂಗಮೇಶ ಪಾಟೀಲ, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಜನ ಮಲ್ಲಿಕಾರ್ಜುನ, ಪ್ರಧಾನ ವ್ಯವಸ್ಥಾಪಕರಾದ ವಿಠ್ಠಲರೆಡ್ಡಿ ಯಡಮಲ್ಲೆ, ಚನ್ನಬಸಯ್ಯ ಸ್ವಾಮಿ ಇದ್ದರು. ಶ್ರೀಧರ ಕುಲಕರ್ಣಿ ನಿರೂಪಿಸಿದರು. ಅನಿಲ್ ಪಾಟೀಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.