ADVERTISEMENT

ಶೇ 11 ರಷ್ಟು ತುಟ್ಟಿ ಭತ್ಯೆ: ಸರ್ಕಾರಿ ನೌಕರರಿಗೆ ಅನುಕೂಲ- ರಾಜೇಂದ್ರಕುಮಾರ ಗಂದಗೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 12:49 IST
Last Updated 24 ಜುಲೈ 2021, 12:49 IST
ರಾಜೇಂದ್ರಕುಮಾರ ಗಂದಗೆ
ರಾಜೇಂದ್ರಕುಮಾರ ಗಂದಗೆ   

ಬೀದರ್: ಶೇ 11 ರಷ್ಟು ತುಟ್ಟಿಭತ್ಯೆ ಹೆಚ್ಚಳ ಆದೇಶದಿಂದ ಬೆಲೆ ಏರಿಕೆ ದಿನಮಾನಗಳಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲ ಆಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಹೇಳಿದ್ದಾರೆ.

ಕೋವಿಡ್ ಸೋಂಕಿನ ಕಾರಣ 2020 ರ ಜನವರಿಯಿಂದ ಮೂರು ತುಟ್ಟಿ ಭತ್ಯೆಗಳನ್ನು ತಡೆ ಹಿಡಿಯಲಾಗಿತ್ತು. ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ನೀಡಲು ಆರ್ಥಿಕ ಇಲಾಖೆಗೆ ಆದೇಶ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಬೆಲೆ ಏರಿಕೆ ಸೂಚ್ಯಂಕ ಆಧರಿಸಿ ತನ್ನ ನೌಕರರಿಗೆ ಶೇ 11 ರಷ್ಟು ತುಟ್ಟಿಭತ್ಯೆ ನೀಡಲು ಸೂಚಿಸಿದೆ. ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ನಿರ್ದೇಶನ ಕೊಟ್ಟಿದೆ. 6 ಲಕ್ಷ ರಾಜ್ಯ ಸರ್ಕಾರಿ ನೌಕರರು, 3 ಲಕ್ಷ ನಿಗಮ ಮಂಡಳಿಗಳ ನೌಕರರು ಹಾಗೂ 4.5 ಲಕ್ಷ ಪಿಂಚಣಿದಾರರಿಗೆ ಇದರ ಲಾಭ ಸಿಗಲಿದೆ ಎಂದು ಹೇಳಿದ್ದಾರೆ.

ADVERTISEMENT

ತುಟ್ಟಿ ಭತ್ಯೆ ಮಂಜೂರಾತಿಗೆ ಆದೇಶ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇದಕ್ಕಾಗಿ ನಿರಂತರ ಪರಿಶ್ರಮ ವಹಿಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಅವರಿಗೆ ಕೃತಜ್ಞತೆ ಅರ್ಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.