ಭಾಲ್ಕಿ: ತಾಲ್ಲೂಕಿನ ದಾಡಗಿ ಗ್ರಾಮ ಸಮೀಪ ಕಾರಂಜಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ದಾಡಗಿ ಸೇತುವೆಯಲ್ಲಿ ಭಾನುವಾರ ಪಟ್ಟಣದ ಹೊರ ವಲಯದ ಬಸವ ನಗರ ನಿವಾಸಿ ಸಂತೋಷ ಧರ್ಮರಾಜ ಕಟ್ಟಿಮನಿ (30) ಮೀನು ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತ ಸಂತೋಷ ತನ್ನ ಸಹೋದರರೊಂದಿಗೆ ಮೀನಿನ ಬಲೆಯೊಂದಿಗೆ ಮೀನು ಹಿಡಿಯಲು ತೆರಳಿದ್ದರು. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಈಜು ಬಾರದಿರುವುದರಿಂದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಖಟಕಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.