ADVERTISEMENT

‘ಶಿವಾಜಿ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ’

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2023, 11:09 IST
Last Updated 11 ಫೆಬ್ರುವರಿ 2023, 11:09 IST
ಬಸವಕಲ್ಯಾಣದಲ್ಲಿ ಶಿವಾಜಿ ಜಯಂತಿ ಆಚರಣಾ ಸಮಿತಿ ಅಧ್ಯಕ್ಷರನ್ನಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗುಂಡುರೆಡ್ಡಿ ಕಮಲಾಪುರೆ ಅವರನ್ನು ಆಯ್ಕೆ ಮಾಡಿ ಸನ್ಮಾನಿಸಲಾಯಿತು. ವಿ.ಟಿ.ಶಿಂಧೆ, ತಾತೇರಾವ್ ಪಾಟೀಲ, ಕೃಷ್ಣಾ ಗೋಣೆ ಇದ್ದರು
ಬಸವಕಲ್ಯಾಣದಲ್ಲಿ ಶಿವಾಜಿ ಜಯಂತಿ ಆಚರಣಾ ಸಮಿತಿ ಅಧ್ಯಕ್ಷರನ್ನಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗುಂಡುರೆಡ್ಡಿ ಕಮಲಾಪುರೆ ಅವರನ್ನು ಆಯ್ಕೆ ಮಾಡಿ ಸನ್ಮಾನಿಸಲಾಯಿತು. ವಿ.ಟಿ.ಶಿಂಧೆ, ತಾತೇರಾವ್ ಪಾಟೀಲ, ಕೃಷ್ಣಾ ಗೋಣೆ ಇದ್ದರು   

ಬಸವಕಲ್ಯಾಣ: ‘ನಗರದಲ್ಲಿ ಫೆಬ್ರುವರಿ 19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುವುದು’ ಎಂದು ಜಯಂತಿ ಆಚರಣಾ ಸಮಿತಿ ಅಧ್ಯಕ್ಷ ಗುಂಡುರೆಡ್ಡಿ ಕಮಲಾಪುರೆ ಹೇಳಿದರು.

ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ತಿನ ವತಿಯಿಂದ ಇಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದರು.

‘ಅಂದು ಮಧ್ಯಾಹ್ನ 4ಕ್ಕೆ ಸಮಾರಂಭ ನಡೆಯಲಿದೆ. ಮರಾಠಾ ಪರಿಷತ್ ಮತ್ತು ಎಲ್ಲ ಸಮುದಾಯಗಳ ಪ್ರಮುಖರು ನನ್ನನ್ನು ಜಯಂತಿ ಆಚರಣಾ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದರು.

ADVERTISEMENT

ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಟಿ.ಶಿಂಧೆ, ಕಾರ್ಯದರ್ಶಿ ತಾತೇರಾವ್ ಪಾಟೀಲ ಮಂಗಳೂರ ಹಾಗೂ ಕೃಷ್ಣಾ ಗೋಣೆ ಮಾತನಾಡಿದರು. ವಿವಿಧ ಸಮುದಾಯಗಳ ಪ್ರಮುಖರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.