ADVERTISEMENT

ಅರ್ಥಪೂರ್ಣ ವೇಮನ್ ಜಯಂತಿಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 14:15 IST
Last Updated 11 ಜನವರಿ 2021, 14:15 IST
ಶಂಕರ ರೆಡ್ಡಿ ಚಿಟ್ಟಾ
ಶಂಕರ ರೆಡ್ಡಿ ಚಿಟ್ಟಾ   

ಬೀದರ್: ನಗರದಲ್ಲಿ ಜ. 19 ರಂದು ಅರ್ಥಪೂರ್ಣವಾಗಿ ವೇಮನ್ ಜಯಂತಿ ಆಚರಿಸಲು ನಿರ್ಧರಿಸಲಾಗಿದೆ ಎಂದು ರೆಡ್ಡಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ರೆಡ್ಡಿ ಚಿಟ್ಟಾ ತಿಳಿಸಿದ್ದಾರೆ.

ಅಮಲಾಪುರ ರಸ್ತೆಯಲ್ಲಿ ಇರುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಮಂದಿರದಲ್ಲಿ ವೇಮನ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ, ಉಪನ್ಯಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಪೂರ್ವ ಭಾವಿ ಸಿದ್ಧತಾ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ರೆಡ್ಡಿ ಸಮಾಜದ ಪ್ರತಿನಿಧಿಗಳು, ಬಡ್ತಿ ಹಾಗೂ ಸೇವಾ ನಿವೃತ್ತಿ ಹೊಂದಿದ ನೌಕರರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ಸಮಾಜದ ಪಂಚಾಯಿತಿಯ ನೂತನ ಸದಸ್ಯರು ಶಿವನಗರದಲ್ಲಿರುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಬ್ಯಾಂಕ್ ಅಥವಾ ಬ್ಯಾಂಕ್ ಅಧ್ಯಕ್ಷರೂ ಆದ ರೆಡ್ಡಿ ಸಮಾಜದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸಂಗ್ರಾಮ ರೆಡ್ಡಿ ಹುಣಸಗೇರಿ (ಮೊ: 9035128751, 8073637536) ಅವರನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಪೂರ್ವ ಭಾವಿ ಸಿದ್ಧತಾ ಸಭೆಯಲ್ಲಿ ರೆಡ್ಡಿ ಸಮಾಜದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸಂಗ್ರಾಮ ರೆಡ್ಡಿ ಹುಣಸಗೇರಿ, ಉಪಾಧ್ಯಕ್ಷ ಚಂದ್ರಶೇಖರ ರೆಡ್ಡಿ, ಕಾರ್ಯದರ್ಶಿ ಗೋಪಾಲ ರೆಡ್ಡಿ, ಮುಖಂಡರಾದ ಶರಣಪ್ಪ ರೆಡ್ಡಿ, ಸುಭಾಷ ರೆಡ್ಡಿ, ವಿಜಯಕುಮಾರ ರೆಡ್ಡಿ, ಗೋವಿಂದ ರೆಡ್ಡಿ, ಪೆಂಟಾರೆಡ್ಡಿ, ಸಂಜು ರೆಡ್ಡಿ ಆಣದೂರು, ಬಲವಂತ ರೆಡ್ಡಿ, ಶ್ರೀನಿವಾಸ ರೆಡ್ಡಿ, ರಾಜ ರೆಡ್ಡಿ, ಜಗನ್ನಾಥ ರೆಡ್ಡಿ, ವೆಂಕಟ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.