ADVERTISEMENT

ಬೀದರ್: ದೇವರ ದಾಸಿಮಯ್ಯ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 14:48 IST
Last Updated 1 ಏಪ್ರಿಲ್ 2022, 14:48 IST
ಬೀದರ್ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದೇವರ ದಾಸಿಮಯ್ಯ ಜಯಂತಿ ಆಚರಣೆ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿದರು
ಬೀದರ್ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದೇವರ ದಾಸಿಮಯ್ಯ ಜಯಂತಿ ಆಚರಣೆ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿದರು   

ಬೀದರ್: ದೇವರ ದಾಸಿಮಯ್ಯ ಜಯಂತಿಯನ್ನು ಏ. 6 ರಂದು ಕೋವಿಡ್ ನಿಯಮ ಪಾಲನೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ತಿಳಿಸಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ದೇವರ ದಾಸಿಮಯ್ಯ ಜಯಂತಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂದು ಬೆಳಿಗ್ಗೆ 8.30ಕ್ಕೆ ಸರ್ಕಾರಿ, ಅರೆ ಸರ್ಕಾರಿ ಕಚೇರಿ, ಸಂಘ ಸಂಸ್ಥೆ, ಶಾಲಾ, ಕಾಲೇಜುಗಳಲ್ಲಿ ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಬೆಳಿಗ್ಗೆ 9ಕ್ಕೆ ಜಿಲ್ಲಾಧಿಕಾರಿ ಕಚೇರಿಯಿಂದ ದೇವರ ದಾಸಿಮಯ್ಯ ಭಾವಚಿತ್ರದ ಮೆರವಣಿಗೆ ಆರಂಭಗೊಂಡು ಪ್ರಮುಖ ಮಾರ್ಗಗಳ ಮೂಲಕ ಪೂಜ್ಯ ಚನ್ನಬಸವ ಪಟ್ಟದ್ದೇವರ ರಂಗ ಮಂದಿರ ತಲುಪುವುದು. ಬೆಳಿಗ್ಗೆ 11 ಕ್ಕೆ ರಂಗಮಂದಿರದಲ್ಲಿ ಸಾರ್ವಜನಿಕ ಸಮಾರಂಭ ನಡೆಯಲಿದೆ ಎಂದು ಹೇಳಿದರು.

ADVERTISEMENT

ಪ್ರಮುಖರಾದ ನಾಗೇಂದ್ರ ದಂಡೆ, ಮಾರುತಿ ಬೌದ್ಧೆ, ರಾಜು ಕಡ್ಯಾಳ, ಪ್ರದೀಪ್ ನಾಟೇಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರವಿಕಿರಣ ಎನ್, ಸೋಮಶೇಖರ, ರಾಮಕೃಷ್ಣ ಸಾಳೆ, ಗುಂಡಪ್ಪ ಕನಕ, ವಿಶ್ವನಾಥ ಕೋಟೆ, ರಾಜಶೇಖರ ವಟಗೆ, ಮಲ್ಲಿಕಾರ್ಜುನ ಬೆಳಕೇರೆ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.