ADVERTISEMENT

ಕಡಿಮೆಯಾದ ಅರಣ್ಯ ಪ್ರಮಾಣ: ಮಾಸಿಮಾಡೆ ಕಳವಳ

ಅರುಣೋದಯ ಶಾಲೆಯಲ್ಲಿ ವಿಶ್ವ ಅರಣ್ಯ, ಜಲ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 13:13 IST
Last Updated 25 ಮಾರ್ಚ್ 2023, 13:13 IST
ಬೀದರ್‌ನ ಅರುಣೋದಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿಶ್ವ ಅರಣ್ಯ ಹಾಗೂ ಜಲ ದಿನಾಚರಣೆ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಸಸಿಗೆ ನೀರೆರೆದು ಉದ್ಘಾಟಿಸಿದರು
ಬೀದರ್‌ನ ಅರುಣೋದಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿಶ್ವ ಅರಣ್ಯ ಹಾಗೂ ಜಲ ದಿನಾಚರಣೆ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಸಸಿಗೆ ನೀರೆರೆದು ಉದ್ಘಾಟಿಸಿದರು   

ಬೀದರ್: ದೇಶದಲ್ಲಿ ಅರಣ್ಯ ಪ್ರಮಾಣ ಕಡಿಮೆಯಾಗುತ್ತಿರುವುದು ಕಳವಳಕಾರಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಹೇಳಿದರು.

ಇಲ್ಲಿಯ ಅರುಣೋದಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿಶ್ವ ಅರಣ್ಯ ಹಾಗೂ ಜಲ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಶೇ 33 ರಷ್ಟು ಅರಣ್ಯ ಇರಬೇಕಿತ್ತು. ಆದರೆ, ಶೇ 10 ರಷ್ಟು ಮಾತ್ರ ಉಳಿದಿದೆ. ಕಾರಣ, ಸಾಲ ಮರ ತಿಮ್ಮಕ್ಕ ಅವರಂತೆ ಎಲ್ಲರೂ ಸಸಿಗಳನ್ನು ನೆಟ್ಟು ಪೋಷಿಸಬೇಕು. ಅರಣ್ಯ ರಕ್ಷಣೆಗೆ ಸಂಕಲ್ಪ ತೊಡಬೇಕು ಎಂದು ಹೇಳಿದರು.

ADVERTISEMENT

ಅರಣ್ಯ ನಿಗರ್ಸದ ಅತ್ಯಮೂಲ್ಯ ಕೊಡುಗೆಯಾಗಿದೆ. ಮಣ್ಣನ್ನು ರಕ್ಷಿಸುತ್ತದೆ. ತೇವ ಹಾಗೂ ಉಷ್ಣತೆಯನ್ನು ನಿಯಂತ್ರಣದಲ್ಲಿ ಇಡುತ್ತದೆ ಎಂದು ನುಡಿದರು.

ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ಮಾತನಾಡಿ, ಪ್ರಕೃತಿ ಮಾನವನಿಗೆ ಎಲ್ಲವನ್ನೂ ಕೊಟ್ಟಿದೆ. ಅರಣ್ಯ ರಕ್ಷಣೆ ಎಲ್ಲರ ಹೊಣೆಯಾಗಿದೆ. ಮಕ್ಕಳು ಸಸಿ ನೆಟ್ಟು, ಅವುಗಳಿಗೆ ತಮ್ಮ ಹೆಸರಿಟ್ಟು ಬೆಳೆಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಸಂಯೋಜಕ ಸಂಜೀವಕುಮಾರ ಸ್ವಾಮಿ ಮಾತನಾಡಿ, ಸಕಲ ಜೀವಗಳಿಗೆ ಜಲವೇ ಜೀವನಾಧಾರ. ಅಮೃತಕ್ಕೆ ಸಮಾನವಾದ ನೀರನ್ನು ನಮಗಾಗಿ, ಮುಂದಿನ ಪೀಳಿಗೆಗಾಗಿ ಉಳಿಸಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಋಷಿಕೇಶ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ ಮಾತನಾಡಿ, ಮಕ್ಕಳು ತಮ್ಮ ಜನ್ಮದಿನದ ಸವಿ ನೆನಪಿಗಾಗಿ ಸಸಿಗಳನ್ನು ನೆಡಬೇಕು ಎಂದು ಸಲಹೆ ಮಾಡಿದರು.

ಅರುಣೋದಯ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಈಶ್ವರಿ ಬೇಲೂರೆ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಬಸವರಾಜ ಮುಗುಟಾಪುರೆ, ಸುನೀತಾ ಕಾಜಿ, ಪೂಜಾ ಕಡ್ಡೆ, ನೀಲಮ್ಮ ಗಜರೆ, ಸುವರ್ಣ ಪಾಟೀಲ, ಸಾರಿಕಾ ಬಿರಾದಾರ, ಸ್ವಪ್ನರಾಣಿ ಪಾಟೀಲ, ಚಂದ್ರಕಲಾ ಸ್ವಾಮಿ, ಪಾರ್ವತಿ ಬಿರಾದಾರ, ಶೈಲಜಾ ಸ್ವಾಮಿ, ಪೂಜಾ ರಾಣಿ, ಪುರುಷೋತ್ತಮ, ಆಕಾಶ ಮೋರೆ, ಮಾರುತೆಪ್ಪ ಗುನ್ನಳ್ಳಿ ಇದ್ದರು.
ನ್ಯೂ ಮದರ್ ತೆರೆಸಾ ನಗರ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಕಲ್ಯಾಣ ಭಾರತಿ ಕಲೆ, ಸಾಹಿತ್ಯ ಹಾಗೂ ಸಾಂಸ್ಕøತಿಕ ಟ್ರಸ್ಟ್ ಮತ್ತು ಆರ್ಯಭಟ ಪ್ರತಿಷ್ಠಾನ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.