ADVERTISEMENT

ಬಸವಕಲ್ಯಾಣ: ಜಿಂಕೆ ಮರಿ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 13:47 IST
Last Updated 31 ಮಾರ್ಚ್ 2023, 13:47 IST
ಬಸವಕಲ್ಯಾಣ ತಾಲ್ಲೂಕಿನ ಗೌರದಲ್ಲಿ ಬಾವಿಗೆ ಬಿದ್ದ ಜಿಂಕೆ ಮರಿಯನ್ನು ರಕ್ಷಿಸಲಾಯಿತು
ಬಸವಕಲ್ಯಾಣ ತಾಲ್ಲೂಕಿನ ಗೌರದಲ್ಲಿ ಬಾವಿಗೆ ಬಿದ್ದ ಜಿಂಕೆ ಮರಿಯನ್ನು ರಕ್ಷಿಸಲಾಯಿತು   

ಬಸವಕಲ್ಯಾಣ: ತಾಲ್ಲೂಕಿನ ಗೌರ ಗ್ರಾಮದ ವಿಶ್ವನಾಥ ಡಬಾಳೆ ಅವರಿಗೆ ಸೇರಿದ ಬಾವಿಗೆ ಬಿದ್ದ ಜಿಂಕೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಶುಕ್ರವಾರ ರಕ್ಷಿಸಿದ್ದಾರೆ.

ಜಿಂಕೆ ಬಾವಿಗೆ ಬಿದ್ದು ಒದ್ದಾಡುತ್ತಿರುವುದನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಆಗ ಇಲಾಖೆ ಸಿಬ್ಬಂದಿ ಮಹೇಶ ಜಂಗಿ, ಸಂತೊಷ ಅವರು ಬಾವಿಯಿಂದ ಅದನ್ನು ಹೊರತೆಗೆದು ಅರಣ್ಯಕ್ಕೆ ಬಿಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT