ADVERTISEMENT

‘ರಾಷ್ಟ್ರೀಯ ಪಕ್ಷಗಳನ್ನು ಸೋಲಿಸಿ’

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2021, 2:39 IST
Last Updated 5 ಏಪ್ರಿಲ್ 2021, 2:39 IST
ಬಸವಕಲ್ಯಾಣ ತಾಲ್ಲೂಕಿನ ಗದಲೇಗಾಂವದಲ್ಲಿ ಶನಿವಾರ ನಡೆದ ಜೆಡಿಎಸ್ ಪ್ರಚಾರ ಸಭೆಯಲ್ಲಿ ಶಾಸಕ ಬಂಡೆಪ್ಪ ಕಾಶೆಂಪೂರ ಮಾತನಾಡಿದರು
ಬಸವಕಲ್ಯಾಣ ತಾಲ್ಲೂಕಿನ ಗದಲೇಗಾಂವದಲ್ಲಿ ಶನಿವಾರ ನಡೆದ ಜೆಡಿಎಸ್ ಪ್ರಚಾರ ಸಭೆಯಲ್ಲಿ ಶಾಸಕ ಬಂಡೆಪ್ಪ ಕಾಶೆಂಪೂರ ಮಾತನಾಡಿದರು   

ಬಸವಕಲ್ಯಾಣ: ‘ರಾಷ್ಟ್ರೀಯ ಪಕ್ಷಗಳು ಸೋಲುಂಡು ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬಂದಾಗ ಮಾತ್ರ ರಾಜ್ಯಕ್ಕೆ ಒಳ್ಳೆಯದಾಗಲು ಸಾಧ್ಯ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಖಾಶೆಂಪೂರ್ ತಿಳಿಸಿದರು.

ಬಸವಕಲ್ಯಾಣ, ಹತ್ಯಾಳ, ಹಾರ ಕೂಡ, ಸಿರಗಾಪೂರ, ಗದಲೇಗಾಂವ್, ಮೈಸಲಗಾ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು.

‘ರಾಜ್ಯದಿಂದ ಆಯ್ಕೆಯಾದ ಎಲ್ಲ ಬಿಜೆಪಿ ಸಂಸದರು ರಾಜ್ಯದ ಪರವಾಗಿ ಕೇಂದ್ರದಲ್ಲಿ ಧ್ವನಿ ಎತ್ತಿಲ್ಲ. ಬಸವಕಲ್ಯಾಣದಲ್ಲಿ ಸೈಯದ್‌, ಬೀದರ್‌ನಲ್ಲಿ ಬಂಡೆಪ್ಪ ಖಾಶೆಂಪೂರ್, ಬೆಂಗಳೂರಿನಲ್ಲಿ ಕುಮಾರಣ್ಣ ನಾವು ಯಾವಾಗಲೂ ನಿಮ್ಮ ಕೆಲಸ ಮಾಡಲು ತಯಾರಿದ್ದೇವೆ’ ಎಂದರು.

ADVERTISEMENT

ಜೆಡಿಎಸ್ ಜಿಲ್ಲಾ ಅಧ್ಯಕ್ಷ ರಮೇಶ್ ಪಾಟೀಲ ಸೋಲಪುರ, ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.