
ಬೀದರ್: ನವದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಬಾಂಬ್ ಸ್ಫೋಟ ಸಂಭವಿಸಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಗಡಿ ಜಿಲ್ಲೆ ಬೀದರ್‌ನ ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ನಗರದ ವಿಮಾನ ನಿಲ್ದಾಣ, ರೈಲು ನಿಲ್ದಾಣ, ಕೇಂದ್ರ ಬಸ್ ನಿಲ್ದಾಣ, ಸಿಖ್ ಧರ್ಮೀಯರ ಪವಿತ್ರ ಧಾರ್ಮಿಕ ಕ್ಷೇತ್ರ ಗುರುದ್ವಾರಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಈ ಎಲ್ಲಾ ಸ್ಥಳಗಳಲ್ಲಿ ಮಂಗಳವಾರ ಶ್ವಾನ ದಳದಿಂದ ತಪಾಸಣೆ ನಡೆಸಲಾಯಿತು. ಪ್ರತಿಯೊಬ್ಬರನ್ನೂ ತಪಾಸಣೆ ನಡೆಸಿ ಒಳಗೆ ಬಿಡಲಾಗುತ್ತಿದೆ. ಪೊಲೀಸರ ಗಸ್ತು ಹೆಚ್ಚಿಸಲಾಗಿದೆ. ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳವನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.
ಅದೇ ರೀತಿ ಜಿಲ್ಲೆಯ ಗಡಿ ಭಾಗದ ಚೆಕ್‌ಪೋಸ್ಟ್‌ಗಳಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ನೆರೆಯ ತೆಲಂಗಾಣ, ಮಹಾರಾಷ್ಟ್ರದಿಂದ ಬರುವ ವಾಹನಗಳ ಮೇಲೆ ವಿಶೇಷ ನಿಗಾ ಇರಿಸಲಾಗಿದೆ ಎಂದು ಪೊಲೀಸ್ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.