ADVERTISEMENT

ಡೆಲ್ಟಾ ಪ್ಲಸ್: ಗಡಿಯಲ್ಲಿ ಕಟ್ಟೆಚ್ಚರ ವಹಿಸಿ

​ಪ್ರಜಾವಾಣಿ ವಾರ್ತೆ
Published 28 ಜೂನ್ 2021, 14:23 IST
Last Updated 28 ಜೂನ್ 2021, 14:23 IST
ಪ್ರಭು ಚವಾಣ್
ಪ್ರಭು ಚವಾಣ್   

ಬೀದರ್‌: ಕೋವಿಡ್ ಡೆಲ್ಟಾ ಪ್ಲಸ್ ಸೋಂಕು ತಡೆಗೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಗಡಿ ಭಾಗಗಳಲ್ಲಿ ಇನ್ನಷ್ಟು ಕೆಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಹಾರಾಷ್ಟ್ರ ಹಾಗೂ ತೆಲಂಗಾಣದಿಂದ ಬರುವ ವ್ಯಕ್ತಿಗಳು ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡ 72 ತಾಸುಗಳ ಮುಂಚಿನ ನೆಗೆಟಿವ್ ವರದಿ ತರುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದ್ದಾರೆ.

ಜಿಲ್ಲೆಯ ಗಡಿಯಲ್ಲಿರುವ ಚೆಕ್‍ಪೋಸ್ಟ್‌ಗಳು ದಿನದ 24 ಗಂಟೆಯೂ ಈ ಹಿಂದಿನಂತೆ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು. ಹೊರ ರಾಜ್ಯಗಳಿಂದ ಜಿಲ್ಲೆಗೆ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಬೇಕು. ಕೋವಿಡ್ ಪರೀಕ್ಷೆಯ ವರದಿಯನ್ನು ವೀಕ್ಷಿಸಿಯೇ ಜಿಲ್ಲೆಯ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.