ADVERTISEMENT

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕೋರ್ಸ್‍ಗೆ ಬೇಡಿಕೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 5:08 IST
Last Updated 18 ಜುಲೈ 2021, 5:08 IST
ಬೀದರ್‌ನ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷೀನ್ ಲರ್ನಿಂಗ್ ಕೋರ್ಸ್‍ಗೆ ಚಾಲನೆ ನೀಡಲಾಯಿತು
ಬೀದರ್‌ನ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷೀನ್ ಲರ್ನಿಂಗ್ ಕೋರ್ಸ್‍ಗೆ ಚಾಲನೆ ನೀಡಲಾಯಿತು   

ಬೀದರ್: ಪ್ರಸ್ತುತ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷೀನ್ ಲರ್ನಿಂಗ್ ಕೋರ್ಸ್‍ಗೆ ಬಹು ಬೇಡಿಕೆ ಇದೆ. ನಾಲ್ಕು ವರ್ಷಗಳ ಕೋರ್ಸ್ ಪೂರೈಸುತ್ತಲೇ ಐಟಿ ಕಂಪೆನಿಗಳಲ್ಲಿ ಉದ್ಯೋಗ ಅವಕಾಶಗಳು ಲಭಿಸುತ್ತಿವೆ ಎಂದು ಪ್ರಾಚಾರ್ಯ ಡಾ. ರವೀಂದ್ರ ಎಕಲಾರಕರ್ ತಿಳಿಸಿದರು.

ಇಲ್ಲಿಯ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷೀನ್ ಲರ್ನಿಂಗ್ ಕೋರ್ಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ವಿದ್ಯಾರ್ಥಿಗಳು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷೀನ್ ಲರ್ನಿಂಗ್ ಕೋರ್ಸ್ ಸದುಪಯೋಗ ಪಡೆಯಬೇಕು ಎಂದು ಗುರುನಾನಕ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ಹೇಳಿದರು.

ADVERTISEMENT

ವಿದ್ಯಾರ್ಥಿಗಳ ಓದು ಪರೀಕ್ಷೆಗೆ ಸೀಮಿತವಾಗಬಾರದು. ಓದಿನ ಉದ್ದೇಶ ಜ್ಞಾನಾರ್ಜನೆ ಆಗಬೇಕು. ಮೊಬೈಲ್ ಬಂದ ನಂತರ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಮೊಬೈಲ್ ಅನ್ನು ರಚನಾತ್ಮಕ ಉದ್ದೇಶಕ್ಕೆ ಬಳಸಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಕರ್ನಲ್ ಡಾ.ಬಿ.ಎಸ್. ಧಾಲಿವಾಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.