ADVERTISEMENT

ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 16:45 IST
Last Updated 8 ಸೆಪ್ಟೆಂಬರ್ 2022, 16:45 IST
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಿಸಲು ಮುಖ್ಯಮಂತ್ರಿ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿ ಕರ್ನಾಟಕ ಸ್ವಾಭಿಮಾನಿ ಎಸ್.ಸಿ., ಎಸ್.ಟಿ. ಸಂಘಟನೆಗಳ ಒಕ್ಕೂಟ ಹಾಗೂ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ ಪದಾಧಿಕಾರಿಗಳು ಬೀದರ್‌ನಲ್ಲಿ ಶಾಸಕ ರಹೀಂಖಾನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು

ಬೀದರ್: ಪರಿಶಿಷ್ಟ ಜಾತಿ ಮೀಸಲಾತಿ ಪ್ರಮಾಣ ಶೇ 15 ರಿಂದ ಶೇ 17 ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಶೇ 3 ರಿಂದ ಶೇ 7ಕ್ಕೆ ಹೆಚ್ಚಿಸಬೇಕು ಎಂದು ಕರ್ನಾಟಕ ಸ್ವಾಭಿಮಾನಿ ಎಸ್.ಸಿ., ಎಸ್.ಟಿ ಸಂಘಟನೆಗಳ ಒಕ್ಕೂಟ ಹಾಗೂ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಒಕ್ಕೂಟ ಹಾಗೂ ಸಮಿತಿ ಪದಾಧಿಕಾರಿಗಳು ನಗರದಲ್ಲಿ ಶಾಸಕ ರಹೀಂಖಾನ್ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದರು.
ಮೀಸಲಾತಿ ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಅವರನ್ನು ಮೌಖಿಕವಾಗಿ ಒತ್ತಾಯಿಸಬೇಕು. ಅವರಿಗೆ ಪತ್ರವೊಂದನ್ನೂ ಬರೆಯಬೇಕು ಎಂದು ಬೇಡಿಕೆ ಮಂಡಿಸಿದರು.

ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಮೂಲಭಾರತಿ, ಸಂಚಾಲಕರಾದ ಬಾಬುರಾವ್ ಪಾಸ್ವಾನ್, ಚಂದ್ರಕಾಂತ ನಿರಾಟೆ, ಸಂದೀಪ್ ಕಾಂಟೆ, ಶ್ರೀಪತರಾವ್ ದೀನೆ ಮೊದಲಾದವರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.