ADVERTISEMENT

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದತಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 16:03 IST
Last Updated 10 ಆಗಸ್ಟ್ 2020, 16:03 IST
ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದುಪಡಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ (ಕೋಡಿಹಳ್ಳಿ ಚಂದ್ರಶೇಖರ ಬಣ)ದ ಕಾರ್ಯಕರ್ತರು ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು
ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದುಪಡಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ (ಕೋಡಿಹಳ್ಳಿ ಚಂದ್ರಶೇಖರ ಬಣ)ದ ಕಾರ್ಯಕರ್ತರು ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು   

ಬೀದರ್: ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ(ಕೋಡಿಹಳ್ಳಿ ಚಂದ್ರಶೇಖರ ಬಣ)ದ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಸಲ್ಲಿಸಿದರು.

ವಿದ್ಯುಚ್ಛಕ್ತಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಪ್ರಮುಖರಾದ ಚಂದ್ರಶೇಖರ ಜಮಖಂಡಿ, ಶೇಷರಾವ್ ಕಣಜಿ, ಸತೀಶ ನನ್ನೂರೆ, ಪ್ರವೀಣ ಕುಲಕರ್ಣಿ, ಬಾಬುರಾವ್ ಜೋಳದಾಪಕಾ, ಪ್ರಕಾಶ ಬಾವಗೆ, ಸುಭಾಷ ರಗಟೆ, ವೈಜಿನಾಥ ನೌಬಾದೆ, ಗುರುಲಿಂಗಪ್ಪ ಮೇಲ್ದೊಡ್ಡಿ, ದಿಲೀಪ ಕುಲಕರ್ಣಿ, ವೈಜಿನಾಥ ವಡ್ಡೆ, ಭಾವರಾವ್ ಪಾಟೀಲ, ಬಾಬುರಾವ್ ಕಣಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.