ಬೀದರ್: ಮಾರುಕಟ್ಟೆಯಲ್ಲಿ 5,10 ಹಾಗೂ 20 ರೂಪಾಯಿ ಮುಖಬೆಲೆಯ ನಾಣ್ಯ ಹಾಗೂ ನೋಟುಗಳ ಅಭಾವವಿದ್ದು, ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ಕೊರತೆ ನೀಗಿಸಬೇಕೆಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಬಿ.ಜಿ. ಶೆಟಕಾರ, ಪ್ರಧಾನ ಕಾರ್ಯದರ್ಶಿ ವೀರೇಂದ್ರ ಶಾಸ್ತ್ರಿ ಆಗ್ರಹಿಸಿದ್ದಾರೆ.
ಈ ಸಂಬಂಧ ಅವರು ಭಾರತೀಯ ರಿಸರ್ವ್ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.
ಮೇಲೆ ಉಲ್ಲೇಖಿಸಿದ ನಾಣ್ಯಗಳು ಹಾಗೂ ಕರೆನ್ಸಿಗಳ ಅನುಪಾತಗಳ ಲೆಕ್ಕಾಚಾರದಲ್ಲಿ ವ್ಯತ್ಯಾಸ ಉಂಟಾಗುತ್ತಿದೆ. ಬ್ಯಾಂಕರ್‌ಗಳು, ಗ್ರಾಹಕರಿಗೆ ಪೂರೈಸಲು ಹಾಗೂ ವ್ಯಾಪಾರೋದ್ಯಮಿಗಳಿಗೆ ಆಗುತ್ತಿರುವ ಅನಾನುಕೂಲತೆ ಗಮನದಲ್ಲಿ ಇಟ್ಟುಕೊಂಡು ಮಾರುಕಟ್ಟೆಯಲ್ಲಿ ಸರಳ ಚಲಾವಣೆಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಜಿಲ್ಲೆಯ ಎಲ್ಲ ವಾಣಿಜ್ಯೋದ್ಯಮಿಗಳು, ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಯವರು ತಮ್ಮ ವ್ಯವಹಾರದಲ್ಲಿ ನಾಣ್ಯಗಳು ಹಾಗೂ ಒಂದೇ ಮುಖಬೆಲೆಯ ವಿಭಿನ್ನ ವಿನ್ಯಾಸವನ್ನು ಹೊಂದಿರುವ ನಾಣ್ಯಗಳನ್ನು ಹಿಂಜರಿಕೆಯಿಲ್ಲದೆ ಸ್ವೀಕರಿಸುವ ಮತ್ತು ವಿನಿಮಯ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.