ADVERTISEMENT

ಎಂಎಲ್‌ಸಿ ಮಾಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಮೇ 2024, 15:31 IST
Last Updated 26 ಮೇ 2024, 15:31 IST

ಬೀದರ್‌: ‘ಕಾಂಗ್ರೆಸ್‌ ಮುಖಂಡ ಎಸ್‌.ಪಿ. ರಾಜಶೇಖರ್ ಅವರಿಗೆ ಕಾಂಗ್ರೆಸ್‌ ಪಕ್ಷ ವಿಧಾನ ಪರಿಷತ್‌ ಸದಸ್ಯರಾಗಿ ನೇಮಕ ಮಾಡಬೇಕು’ ಎಂದು ಕರ್ನಾಟಕ ಕ್ರಿಶ್ಚಿಯನ್ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಅನಿಲ್‌ ನಿಡೋದಾ ಆಗ್ರಹಿಸಿದ್ದಾರೆ.

ರಾಜಶೇಖರ್‌ ಅವರು ಕಳೆದ 30–40 ವರ್ಷಗಳಿಂದ ಕಾಂಗ್ರೆಸ್‌ ಪಕ್ಷದ ಸಂಘಟನೆಗೆ ಶ್ರಮಿಸುತ್ತಿದ್ದಾರೆ. ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿದ್ದಾರೆ. ರಾಜಶೇಖರ್‌ ಅವರಿಗೆ ಎಂಎಲ್‌ಸಿ ಮಾಡಿದರೆ ಅವರ ಶ್ರಮಕ್ಕೆ ಬೆಲೆ ಕೊಟ್ಟಂತಾಗುತ್ತದೆ. ಕ್ರೈಸ್ತ ಸಮಾಜಕ್ಕೂ ಪ್ರಾತಿನಿಧ್ಯ ಸಿಕ್ಕಂತಾಗುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT