ಜನವಾಡ: ಡಾನ್ ಬೊಸ್ಕೊ ಸಮಾಜ ಸೇವಾ ಸಂಸ್ಥೆ ಹಾಗೂ ಬೆಂಗಳೂರು ರೂರಲ್ ಎಜುಕೇಷನಲ್ ಆ್ಯಂಡ್ ಡೆವಲಪ್‍ಮೆಂಟ್ ಸೊಸೈಟಿಯಿಂದ ಬೀದರ್ ತಾಲ್ಲೂಕಿನ ರಾಜನಾಳ ಹಾಗೂ ಸಾಂಗ್ವಿ ಗ್ರಾಮದಲ್ಲಿ ಈಚೆಗೆ ಡೆಂಗಿ ಕುರಿತು ಜನ ಜಾಗೃತಿ ಮೂಡಿಸಲಾಯಿತು.
ಮೊಬೈಲ್ ಕ್ಲಿನಿಕ್ ಮೂಲಕ ಡೆಂಗಿ ಲಕ್ಷಣ ಹಾಗೂ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಲಾಯಿತು.
ಸಂಸ್ಥೆಯ ನಿರ್ದೇಶಕ ಫಾದರ್ ಸ್ಟಿವನ್ ಮಾತನಾಡಿ, ‘ಡೆಂಗಿ ನಿಯಂತ್ರಣಕ್ಕೆ ಸ್ವಚ್ಛತೆ ಕಾಯ್ದುಕೊಳ್ಳಬೇಕು. ಗ್ರಾಮದ ಚರಂಡಿಗಳನ್ನು ಶುಚಿಗೊಳಿಸಬೇಕು. ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಮನೆಯಲ್ಲಿ ರಾತ್ರಿ ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಜ್ವರ ಕಂಡು ಬಂದಲ್ಲಿ ತಕ್ಷಣ ವೈದ್ಯರ ಬಳಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಕುಮಾರ, ಮಂಗಳ ಪ್ರಕಾಶ, ಅಂಗನವಾಡಿ ಕಾರ್ಯಕರ್ತೆ ಜಗದೇವಿ, ಆಶಾ ಕಾರ್ಯಕರ್ತೆ ಮಲ್ಲಮ್ಮ, ಮಹಾದೇವಿ, ಮೊಬೈಲ್ ಕ್ಲಿನಿಕ್ ಸಿಬ್ಬಂದಿ ಥಾಮಸ್, ಸೀಮನ್, ರಾಜಶ್ರೀ, ಶರ್ಲಿನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.