ADVERTISEMENT

ಅಭಿವೃದ್ಧಿ ಕಾಮಗಾರಿ ಸ್ಥಗಿತ: ಕರವೇ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 11:31 IST
Last Updated 19 ಆಗಸ್ಟ್ 2022, 11:31 IST
ಬೀದರ್‌ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಪರ ಸಂಘಟನೆಗಳ ಒಕ್ಕೂಟ)ಯ ಕಾರ್ಯಕರ್ತರು ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು
ಬೀದರ್‌ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಪರ ಸಂಘಟನೆಗಳ ಒಕ್ಕೂಟ)ಯ ಕಾರ್ಯಕರ್ತರು ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು   

ಬೀದರ್: ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆಯದ ಕಾರಣ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಪರ ಸಂಘಟನೆಗಳ ಒಕ್ಕೂಟ)ಯ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಪೌರಾಡಳಿತ ಸಚಿವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.
ನಗರದ ಅನೇಕ ವಾರ್ಡ್‍ಗಳಲ್ಲಿ ಸರಿಯಾದ ಚರಂಡಿಗಳಿಲ್ಲ. ಮಳೆ ನೀರು ರಸ್ತೆಯಲ್ಲಿ ನಿಲ್ಲುತ್ತಿದೆ. ದಾರಿ ದೀಪಗಳಿಲ್ಲದ ಕಾರಣ ರಾತ್ರಿ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ ಎಂದು ದೂರಿದರು.
ಸಾರ್ವಜನಿಕರ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಒತ್ತಾಯಿಸಿದರು.
ವೇದಿಕೆಯ ಜಿಲ್ಲಾ ಘಟಕದ ಗೌರವಾಧ್ಯಕ್ಷ ರಾಜಕುಮಾರ ಹಲಮಡಗೆ, ಅಧ್ಯಕ್ಷ ಪೀಟರ್ ಚಿಟಗುಪ್ಪ, ಜಗನ್ನಾಥ ಕೌಠಾ, ಪ್ರಕಾಶ ಬಗದಲಕರ್, ಪ್ರದೀಪ್ ಕೋಟೆ, ಅಜಯ್ ಕೋಟೆ, ಪ್ರಶಾಂತ, ಚಂದ್ರಕಾಂತ ಪೋಳ್, ಸಚಿನ್ ರೆಡ್ಡಿ, ಬಳಿರಾಮ ಮೇತ್ರೆ, ಅನಿಲ್ ದೇವಕತೆ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.