ಬೀದರ್: 'ಧರ್ಮಸ್ಥಳದ ಮೀಸಲು ಅರಣ್ಯ ಪ್ರದೇಶದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಕ್ರಮ ಜರುಗಿಸಲಾಗುವುದು' ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಅರಣ್ಯ ಇಲಾಖೆಯವರು ಬೇಜವಾಬ್ದಾರಿ ತೋರಿರುವುದು ದೃಢಪಟ್ಟರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ ತನಿಖೆ ನಡೆಯುತ್ತಿದೆ. ಎಲ್ಲಿ ಅಕ್ರಮವಾಗಿದೆ. ಯಾವ ಅರಣ್ಯ ಪ್ರದೇಶ, ಸರ್ವೇ ನಂಬರ್ ಯಾವುದು, ಯಾರ ವ್ಯಾಪ್ತಿ ಬರುತ್ತದೆ ಅದನ್ನೆಲ್ಲ ನೋಡಿಕೊಂಡು ಕ್ರಮ ಜರುಗಿಸಲಾಗುವುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.