
ಸಚಿವ ದಿನೇಶ್ ಗುಂಡೂರಾವ್
ಬೀದರ್: ‘ಮುಖ್ಯಮಂತ್ರಿ ಯಾರೆಂಬುದು ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಸ್ವತಃ ಮುಖ್ಯಮಂತ್ರಿಯವರೇ ಈ ವಿಷಯ ಹೇಳಿದ್ದಾರೆ. ಅವರ ಕೆಲವು ಬೆಂಬಲಿಗರು ಹೇಳಿರಬಹುದು. ಆದರೆ, ಯಾರೋ ಏನೋ ಹೇಳಿಕೆ ಕೊಟ್ಟರೆ ಬದಲಾಗಲ್ಲ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸಿಎಂ ಯಾರಾಗುತ್ತಾರೆ ಎನ್ನುವುದರ ಬಗ್ಗೆ ಚರ್ಚೆ ನಡೆಸುವ ಅಗತ್ಯವಿಲ್ಲ. ಕೆಲವರ ಹೇಳಿಕೆಗಳಿಂದ ಈ ರೀತಿಯ ಚರ್ಚೆಗಳು ಆಗುತ್ತಿರುತ್ತವೆ. ಆದರೆ, ಇದೆಲ್ಲ ಅನಗತ್ಯ. ಇದರ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಈಗಾಗಲೇ ಹೇಳಿದ್ದಾರೆ ಎಂದು ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿ ಮಗ ಯಾವುದೋ ಮಾಧ್ಯಮದಲ್ಲಿ ಹೇಳಿದ್ದಾರೆ. ಆದರೆ, ಯಾರೋ ಒಬ್ಬರ ತೀರ್ಮಾನವಲ್ಲ. ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಎಲ್ಲರೂ ಹೈಕಮಾಂಡ್ ಒಪ್ಪುತ್ತಾರೆ. ಪಕ್ಷದಲ್ಲಿ ಗುಂಪುಗಾರಿಕೆ, ಭಿನ್ನಮತ ಇಲ್ಲ. ಅಧಿವೇಶನದಲ್ಲಿ ಒಗ್ಗಟ್ಟಾಗಿ ಎದುರಿಸಿದ್ದೇವೆ. ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಏನು ಮಾಡಬೇಕೋ ಅದನ್ನು ಮಾಡುತ್ತದೆ. ಕೆಲವು ಊಹಾಪೋಹಗಳು ಇರುತ್ತವೆ. ಆಯವ್ಯಯದ ನಂತರ ಸಚಿವ ಸಂಪುಟದ ಪುನರ್ ರಚನೆ ಖಂಡಿತವಾಗಿ ಆಗುತ್ತದೆ. ಆಗಲ್ಲ ಎಂದು ನಾನು ಹೇಳಲ್ಲ. ಆದರೆ, ಯಾವಾಗ ಆಗುತ್ತದೆ ಎಂದು ಹೇಳಕ್ಕಾಗಲ್ಲ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.