ADVERTISEMENT

ಸಾಧನೆಗೆ ಅಂಗವಿಕಲತೆ ಅಡ್ಡಿಯಲ್ಲ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ವಿಕಲಚೇತನದ ದಿನಾಚರಣೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 5:20 IST
Last Updated 4 ಡಿಸೆಂಬರ್ 2025, 5:20 IST
ಬೀದರ್ ನಗರದಲ್ಲಿ ನಡೆದ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು
ಬೀದರ್ ನಗರದಲ್ಲಿ ನಡೆದ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು   

ಬೀದರ್: ಸಾಧಿಸುವ ಛಲವಿದ್ದರೆ ಸಾಧನೆಗೆ ಅಂಗವಿಕಲತೆ ಅಡ್ಡಯಾಗದು. ಆದ್ದರಿಂದ ಅಂಗವೈಕಲ್ಯವನ್ನು ನೂನ್ಯತೆ ಎಂದು ಭಾವಿಸದೆ ಸಾಧನೆಯ ಮಾರ್ಗದತ್ತ ಸಾಗಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅಡೆತಡೆಗಳನ್ನು ಮೆಟ್ಟಿ ನಿಂತು ಸಾಧನೆ ಮಾಡಬೇಕು.‌ ಸ್ಥಳೀಯ ಸಂಸ್ಥೆಗಳಲ್ಲಿ ಶೇ 5ರಷ್ಟು ಅನುದಾನವನ್ನು ವಿಕಲಚೇತನರ ಶ್ರೇಯೋಭಿವೃದ್ಧಿಗೆ ಬಳಸುವಂತೆ ನಿರ್ದೇಶನ ನೀಡಲಾಗುವುದು ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವಿಕಲಚೇತರಿಗಾಗಿ ಸುರಕ್ಷಿತ ರ‍್ಯಾಂಪ್‌ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದರು.

ADVERTISEMENT

ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಅಧಿಕಾರಿ ರತ್ನ ಸುಭಾಷ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀಧರ.ಎಂ, ಅನಿಲಕುಮಾರ್ ಬೆಲ್ದಾರ ಸೇರಿದಂತೆ ಇತರರು ಇದ್ದರು.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.