
ಬೀದರ್: ‘ಸರ್ಕಾರವು ಅಂಗವಿಕಲರಿಗೆ ಮೀಸಲಿಡುವ ಅನುದಾನ ದುರ್ಬಳಕೆ ಆಗದಂತೆ ನೋಡಿಕೊಳ್ಳಬೇಕು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ನಗರದಲ್ಲಿ ಸೋಮವಾರ ನಡೆದ ‘ಮಕ್ಕಳ ಸಂರಕ್ಷಣೆ’ ಕುರಿತು ವಿಕಲಚೇತನರ ತಾಲ್ಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರ ಜಿಲ್ಲಾಮಟ್ಟದ ಒಂದು ದಿನದ ಅರಿವಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಬೀದರ್‌ನಿಂದ ಚಾಮರಾಜನಗರದವರೆಗೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಅಂಗವಿಕಲರನ್ನು ಗುರುತಿಸುವಂತ ಕೆಲಸ ಆಗಬೇಕಾಗಿದೆ. ಬೀದರ್ ಜಿಲ್ಲೆಯಿಂದ ಪರಿಣಾಮಕಾರಿಯಾಗಿ ಪ್ರಾರಂಭವಾಗಿ ರಾಜ್ಯದ ಉದ್ದಗಲಕ್ಕೂ ಮಾಡಿ ಸಮಾಜದ ಎಲ್ಲಾ ಅಂಗವಿಕಲರಿಗೆ ಸರ್ಕಾರದ ಸೌಲಭ್ಯ ಸಿಗುವಂತೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶ. ಇದರೊಂದಿಗೆ ಅಂಗವಿಕಲರಿಗೆ ಮೀಸಲಿಟ್ಟ ಅನುದಾನ ದುರ್ಬಳಕೆ ಆಗದಂತೆ ಅವರ ಸೌಲಭ್ಯಗಳ ಬಳಕೆ ಆಗಬೇಕಾಗಿದೆ’ ಎಂದರು.
‘ಸರ್ಕಾರದಿಂದ ಸೌಲಭ್ಯಗಳು ಸಕಾಲದಲ್ಲಿ ಸಿಗುವಂತಾಗಬೇಕು’ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಹರೀಶ್ ಜೋಗಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೂರ್ಯಕಾಂತ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ ಎಂ.ಎಸ್., ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ರೂಪಾ ಎಸ್., ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸೀಮಪ್ಪ, ಬಾಲ ನ್ಯಾಯ ಮಂಡಳಿ ಸದಸ್ಯ ಸಂಜೀವಕುಮಾರ, ಮಕ್ಕಳ ರಕ್ಷಣಾ ಅಧಿಕಾರಿ ಗೌರಿಶಂಕರ ಸೇರಿದಂತೆ ತಾಲ್ಲೂಕು, ನಗರದ ಪುನರ್ವಸತಿ ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಗಳ ಅದಿಕಾರಿಗಳು ಉಪಸ್ಥಿತರಿದ್ದರು.
ಒಂದು ದಿನದ ಅರಿವಿನ ಮನೆ ಅಂಗವಿಕಲರಿಗೆ ಸೌಲಭ್ಯ ಸಿಗಲಿ ಅಂಗವಿಕಲರ ಗುರುತಿಸಲು ಸಲಹೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.