ಬಸವಕಲ್ಯಾಣ: ನೂರಾರು ಜನರಿಗೆ ಮಾಸ್ಕ್ ವಿತರಿಸುವ ಮೂಲಕ ಇಲ್ಲಿನ ಎಬಿವಿಪಿ ಮುಖಂಡ ಲೋಕೇಶ ಮೋಳಕೆರೆ ಬುಧವಾರ ಜನ್ಮದಿನವನ್ನು ಆಚರಿಸಿಕೊಂಡರು. ಓಣಿಗಳಲ್ಲಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ 500ಕ್ಕಿಂತ ಹೆಚ್ಚಿನ ಮಾಸ್ಕ್ ವಿತರಿಸಿದ್ದಾರೆ.
ಕಳೆದ ವರ್ಷ ಕೂಡ ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಕೆಲ ಮಾನಸಿಕ ಅಸ್ವಸ್ಥರ ತಲೆಗೂದಲು ಕಟ್ ಮಾಡಿ, ಸ್ನಾನ ಮಾಡಿಸಿ ಹೊಸ ಬಟ್ಟೆ ತೊಡಿಸಿ ತಮ್ಮ ಜನ್ಮದಿನವನ್ನು ಆಚರಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.