ADVERTISEMENT

ಡಿಸಿಸಿ ಬ್ಯಾಂಕ್ ಉದ್ಯೋಗಿಗಳಿಗೆ ರಾಷ್ಟ್ರ ಧ್ವಜ ವಿತರಣೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 14:58 IST
Last Updated 11 ಆಗಸ್ಟ್ 2022, 14:58 IST
ಬೀದರ್‌ನ ಡಿಸಿಸಿ ಬ್ಯಾಂಕ್‍ನಲ್ಲಿ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರು ಉದ್ಯೋಗಿಗಳಿಗೆ ರಾಷ್ಟ್ರ ಧ್ವಜ ವಿತರಿಸಿದರು
ಬೀದರ್‌ನ ಡಿಸಿಸಿ ಬ್ಯಾಂಕ್‍ನಲ್ಲಿ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರು ಉದ್ಯೋಗಿಗಳಿಗೆ ರಾಷ್ಟ್ರ ಧ್ವಜ ವಿತರಿಸಿದರು   


ಬೀದರ್: ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರು ನಗರದಲ್ಲಿ ಬ್ಯಾಂಕ್‍ನ ಉದ್ಯೋಗಿಗಳಿಗೆ ರಾಷ್ಟ್ರ ಧ್ವಜ ವಿತರಿಸಿದರು.

ಬ್ಯಾಂಕ್ ಹಾಗೂ ಬ್ಯಾಂಕ್ ಅಧೀನದ ಸಂಘ ಸಂಸ್ಥೆಗಳ ಸಿಬ್ಬಂದಿ ಆಗಸ್ಟ್ 13 ರಿಂದ 15 ರ ವರೆಗೆ ತಮ್ಮ ತಮ್ಮ ಮನೆ ಮೇಲೆ ರಾಷ್ಟ್ರ ಧ್ವಜ ಹಾರಿಸಿ ದೇಶ ಪ್ರೇಮ ಮೆರೆಯಬೇಕು ಎಂದು ಮನವಿ ಮಾಡಿದರು.

ನಿರ್ದೇಶಕರಾದ ವಿಜಯಕುಮಾರ ಎಸ್. ಪಾಟೀಲ ಗಾದಗಿ, ಪರಮೇಶ್ವರ ಮುಗಟೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಮಹಾಜನ್, ಪ್ರಧಾನ ವ್ಯವಸ್ಥಾಪಕರಾದ ವಿಠ್ಠಲರೆಡ್ಡಿ ಯಡಮಲ್ಲೆ, ಚನ್ನಬಸಯ್ಯ ಸ್ವಾಮಿ, ಉಪ ಪ್ರಧಾನ ವ್ಯವಸ್ಥಾಪಕರಾದ ಅನಿಲ್ ಪಾಟೀಲ, ಸದಾಶಿವ ಪಾಟೀಲ, ದೀನದಯಾಳ್ ಮನ್ನಳ್ಳಿ, ರಾಜಶೇಖರಯ್ಯ ಇದ್ದರು.

ವಿದ್ಯಾರಣ್ಯ ಶಾಲೆ-ರಾಷ್ಟ್ರ ಧ್ವಜ ವಿತರಣೆ:

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬೀದರ್‌ನ ವಿದ್ಯಾರಣ್ಯ ಪ್ರೌಢಶಾಲೆಯಲ್ಲಿ ಜಿ.ಕೆ. ಫೌಂಡೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ರಾಷ್ಟ್ರ ಧ್ವಜ ವಿತರಿಸಲಾಯಿತು.

ADVERTISEMENT

ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಜಿಲ್ಲೆಯಲ್ಲಿ ಫೌಂಡೇಷನ್‍ನಿಂದ 75 ಸಾವಿರ ಧ್ವಜಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಫೌಂಡೇಷನ್ ಅಧ್ಯಕ್ಷ ಗುರುನಾಥ ಕೊಳ್ಳೂರು ಹೇಳಿದರು.

ಸಂಸ್ಥೆಯ ಉಪಾಧ್ಯಕ್ಷ ನಾಗೇಶ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಮುಖ್ಯಶಿಕ್ಷಕಿ ಪ್ರತಿಭಾ ಚಾಮಾ ಇದ್ದರು.

ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಎರಡೂವರೆ ಕಿ.ಮೀ. ಶೋಭಾಯಾತ್ರೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.