ಸಂಗೋಳಗಿ (ಜನವಾಡ): ಬೀದರ್ ತಾಲ್ಲೂಕಿನ ಸಂಗೋಳಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆಗೆ ಬುಧವಾರ ಚಾಲನೆ ನೀಡಲಾಯಿತು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಿವಕುಮಾರ ಹಿಂದಾ ರೈತರೊಬ್ಬರಿಗೆ ಸಾಂಕೇತಿಕವಾಗಿ ಬೀಜ ವಿತರಿಸಿ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ವಿಶ್ವನಾಥ ಮುಸ್ತರಿ, ಪ್ರಮುಖರಾದ ವಿಜಯಕುಮಾರ ಮಂಡಗಿ, ಭೀಮಣ್ಣ ಗುತ್ತಿ, ರಾಜಕುಮಾರ ಪಾಟೀಲ, ವಿಶ್ವನಾಥ ಬಿರಾದಾರ, ಬಸವರಾಜ ಖೌದೆ, ಮಹೆಬೂಬ್ ಸಾಬ್, ನಂದು ಮಂಡಗಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.