ADVERTISEMENT

ಜನ ಮೆಚ್ಚುವಂತೆ ಕೆಲಸ ನಿರ್ವಹಿಸುವೆ

ನೂತನ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 15:41 IST
Last Updated 6 ಜೂನ್ 2020, 15:41 IST
ಬೀದರ್‌ನಲ್ಲಿ ಶನಿವಾರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎಚ್.ಆರ್. ಮಹಾದೇವ ಅವರ ಬೀಳ್ಕೊಡುಗೆ ಮತ್ತು ನೂತನ ಜಿಲ್ಲಾಧಿಕಾರಿ ರಾಮಚಂದ್ರನ್ ಸ್ವಾಗತ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್ ಮಾತನಾಡಿದರು
ಬೀದರ್‌ನಲ್ಲಿ ಶನಿವಾರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎಚ್.ಆರ್. ಮಹಾದೇವ ಅವರ ಬೀಳ್ಕೊಡುಗೆ ಮತ್ತು ನೂತನ ಜಿಲ್ಲಾಧಿಕಾರಿ ರಾಮಚಂದ್ರನ್ ಸ್ವಾಗತ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್ ಮಾತನಾಡಿದರು   


ಬೀದರ್: ‘ಜನಮನ ಅರಿತು ಜಿಲ್ಲೆಯ ಜನ ಮೆಚ್ಚುವ ಹಾಗೆ ಕೆಲಸ ನಿರ್ವಹಿಸುವೆ’ ಎಂದು ನೂತನ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಹೇಳಿದರು.


ನಗರದ ಝೀರಾ ಕನ್ವೆನ್ಶನ್ ಹಾಲ್‌ನಲ್ಲಿ ಶನಿವಾರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ ಅವರ ಬೀಳ್ಕೊಡುಗೆ ಮತ್ತು ನೂತನ ಜಿಲ್ಲಾಧಿಕಾರಿ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಒಂದು ತಂಡವಾಗಿ ಕಾರ್ಯನಿರ್ವಹಿಸಿದರೆ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ಅದಕ್ಕೆ ಎಲ್ಲ ಸಹದ್ಯೋಗಿಗಳ ಸಹಕಾರ ಅಗತ್ಯ’ ಎಂದು ತಿಳಿಸಿದರು.

ADVERTISEMENT

‘ನನ್ನ ಅಧಿಕಾರವಧಿಯಲ್ಲಿ ಹಲವು ತೊಡಕುಗಳ ಮಧ್ಯೆಯೂ ಜನಮನ ತಟ್ಟಲು ಸಾಧ್ಯವಾಯಿತು.ಇದೇ
ಒಂದು ದೊಡ್ಡ ಸಾಧನೆ ಎಂದು ಭಾವಿಸಿಕೊಂಡಿದ್ದೇನೆ’ ಎಂದುನಿಕಟಪೂರ್ವ ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ್ ಹೇಳಿದರು.

‘ಮೂರೂವರೆ ವರ್ಷಗಳಲ್ಲಿ ರೈತ ಮುಖಂಡರೊಂದಿಗೆ ಉತ್ತಮ ಸಂಬಂಧವಿಟ್ಟುಕೊಂಡು ಬಂದಿದ್ದೇನೆ. ರೈತರ ಬದುಕಿನಲ್ಲಿ ಹೊಸತನವನ್ನು ತರಲು ಶ್ರಮಪಟ್ಟಿದ್ದೇನೆ’ ಎಂದು ತಿಳಿಸಿದರು.

ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್, ಜಿಲ್ಲಾಧಿಕಾರಿ ಆರ್.ರಾಮಚಂದ್ರನ್, ಜಿಲ್ಲಾ ಪಂಚಾಯಿತಿ ಸಿಇಒ
ಗ್ಯಾನೇಂದ್ರಕುಮಾರ ಗಂಗ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ, ಬೀದರ್ ಉಪ ವಿಭಾಗಾಧಿಕಾರಿ ಅಕ್ಷಯ್ ಶ್ರೀಧರ, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭಂವರಸಿಂಗ್ ಮೀನಾ, ವಾರ್ತಾಧಿಕಾರಿ ಗವಿಸಿದ್ದಪ್ಪ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಸಂಜೀವಕುಮಾರ ಜುಮ್ಮಾ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಶಿವಶಂಕರ ಟೋಕರೆ ಮಾತನಾಡಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಚನ್ನಬಸವ ಹೇಡೆ ನಿರೂಪಿಸಿದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಬಸಪ್ಪ ಕೋಟಪ್ಪಗೋಳ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.