ADVERTISEMENT

‘ಕೊರೊನಾ ಹರಡದಂತೆ ಎಚ್ಚರ ವಹಿಸಿ’: ಸಚಿವ ಪ್ರಭು ಚವಾಣ್

​ಪ್ರಜಾವಾಣಿ ವಾರ್ತೆ
Published 23 ಜೂನ್ 2020, 12:32 IST
Last Updated 23 ಜೂನ್ 2020, 12:32 IST
ಹುಮನಾಬಾದ್‍ನ ಸರ್ಕಾರಿ ಅಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ನಾಗನಾಥ ಹುಲಸೂರೆ ಅವರಿಂದ ಸಚಿವ ಪ್ರಭು ಚವಾಣ್ ಅವರು ಮಾಹಿತಿ ಪಡೆದರು
ಹುಮನಾಬಾದ್‍ನ ಸರ್ಕಾರಿ ಅಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ನಾಗನಾಥ ಹುಲಸೂರೆ ಅವರಿಂದ ಸಚಿವ ಪ್ರಭು ಚವಾಣ್ ಅವರು ಮಾಹಿತಿ ಪಡೆದರು   

ಹುಮನಾಬಾದ್: ‘ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಕೊರೊನಾ ಹರಡದಂತೆ ಎಚ್ಚರ ವಹಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ವೈದ್ಯರಿಗೆ ಸೂಚಿಸಿದರು.

ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮುಖ್ಯ ವೈದ್ಯಾಧಿಕಾರಿ ಡಾ.ನಾಗನಾಥ ಹುಲಸೂರೆ ಅವರಿಂದ ಮಾಹಿತಿ ಪಡೆದರು.

ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಸೋಂಕು ಹರಡದಂತೆ ಮುಂಜಾಗ್ರತೆ ವಹಿಸಬೇಕು. ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಬೇಕು. ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ADVERTISEMENT

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ, ಡಿಎಚ್‍ಒ ಡಾ.ವಿ.ಜಿ.ರೆಡ್ಡಿ, ಉಪವಿಭಾಗಾಧಿಕಾರಿ ಭಂವರ್‌ ಸಿಂಗ್ ಮೀನಾ, ತಹಶೀಲ್ದಾರ್ ನಾಗಯ್ಯ ಹಿರೇಮಠ, ನೋಡಲ್ ಅಧಿಕಾರಿ ಡಾ.ಗೋವಿಂದ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ ಮೈಲಾರೆ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಹಾಗೂ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಳಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.