ADVERTISEMENT

ಜಿಲ್ಲಾಮಟ್ಟದ ದೇಹದಾರ್ಢ್ಯ ಸ್ಪರ್ಧೆ 11ಕ್ಕೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 13:05 IST
Last Updated 5 ಡಿಸೆಂಬರ್ 2022, 13:05 IST
ಅಬ್ದುಲ್ ಮನ್ನಾನ್ ಸೇಠ್
ಅಬ್ದುಲ್ ಮನ್ನಾನ್ ಸೇಠ್   

ಬೀದರ್‌: ಜಿಲ್ಲಾಮಟ್ಟದ ದೇಹದಾರ್ಢ್ಯ ಸ್ಪರ್ಧೆ ಡಿ. 11 ರಂದು ನಗರದ ರಂಗ ಮಂದಿರದಲ್ಲಿ ನಡೆಯಲಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್ ಅವರ ಪ್ರಾಯೋಜಕತ್ವದಲ್ಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವರಿಗೆ ಕ್ರಮವಾಗಿ ₹ 40 ಸಾವಿರ, ₹ 25 ಸಾವಿರ ಹಾಗೂ ₹ 15 ಸಾವಿರ ನಗದು ಹಾಗೂ ಟ್ರೋಫಿ ದೊರೆಯಲಿದೆ.

ADVERTISEMENT

ಉತ್ತಮ ಆರೋಗ್ಯಕ್ಕಾಗಿ ದೈಹಿಕ ಸದೃಢತೆ ಬಹಳ ಅವಶ್ಯಕವಾಗಿದೆ. ದೇಹದಾಢ್ರ್ಯ ಪಟುಗಳನ್ನು ಪ್ರೋತ್ಸಾಹಿಸಲು ಸ್ಪರ್ಧೆ ಆಯೋಜಿಸಲಾಗಿದೆ ಎಂದು ಅಬ್ದುಲ್ ಮನ್ನಾನ್ ಸೇಠ್ ತಿಳಿಸಿದ್ದಾರೆ.

ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9241146111, 9110688350 ಅಥವಾ 7760665457ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.