ADVERTISEMENT

ರೋಗಿಗಳ ಜತೆ ಕನ್ನಡದಲ್ಲೇ ವ್ಯವಹಾರ: ಡಿಎಚ್‌ಒ ಡಾ. ರೆಡ್ಡಿ ಭರವಸೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2021, 15:11 IST
Last Updated 3 ಜುಲೈ 2021, 15:11 IST
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಬೀದರ್‌ನಲ್ಲಿ ಶುಕ್ರವಾರ ಡಿಎಚ್‌ಒ ಡಾ. ವಿ.ಜಿ. ರೆಡ್ಡಿ ಅವರಿಗೆ ಮನವಿಪತ್ರ ಸಲ್ಲಿಸಿದರು
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಬೀದರ್‌ನಲ್ಲಿ ಶುಕ್ರವಾರ ಡಿಎಚ್‌ಒ ಡಾ. ವಿ.ಜಿ. ರೆಡ್ಡಿ ಅವರಿಗೆ ಮನವಿಪತ್ರ ಸಲ್ಲಿಸಿದರು   

ಬೀದರ್: ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಮೇಲೆ ಕನ್ನಡದಲ್ಲಿ ನಾಮಫಲಕ ಅಳವಡಿಸಲು ಹಾಗೂ ರೋಗಿಗಳೊಂದಿಗೆ ವೈದ್ಯರು ಕನ್ನಡದಲ್ಲೇ ವ್ಯವಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ಭರವಸೆ ನೀಡಿದರು.

ವೈದ್ಯಕೀಯ ವಲಯದಲ್ಲಿ ಕನ್ನಡ ಬಳಕೆ ಅಭಿಯಾನ ಪ್ರಯುಕ್ತ ನಗರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಈಗಾಗಲೇ ಸರ್ಕಾರದಿಂದ ಈ ಕುರಿತ ಸುತ್ತೋಲೆ ಬಂದಿದೆ ಎಂದು ತಿಳಿಸಿದರು.

ವೈದ್ಯಕೀಯ ಸಿಬ್ಬಂದಿ ಕನ್ನಡ ಕಲಿತರೆ ರೋಗಿಯೊಂದಿಗೆ ಸಂವಹನ ಸುಲಭವಾಗುತ್ತದೆ. ಹೀಗಾಗಿ ವೈದ್ಯಕೀಯ ವಲಯದಲ್ಲಿ ಕನ್ನಡ ಬಳಕೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಸದಸ್ಯರು ತಿಳಿಸಿದರು.

ADVERTISEMENT

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರಾದ ವಿಜಯಕುಮಾರ ಸೋನಾರೆ, ಎಂ.ಪಿ. ಮುದಾಳೆ, ಕನ್ನಡಪರ ಸಂಘಟನೆಗಳ ಮುಖಂಡರಾದ ಶ್ರೀಮಂತ ಸಪಾಟೆ, ಸುನೀಲ್ ಭಾವಿಕಟ್ಟಿ, ರವಿ ಕಾಂಬಳೆ, ಚಂದ್ರಕಾಂತ ಹಳ್ಳಿಖೇಡಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.