ಬೀದರ್: ಕಲಬುರ್ಗಿಯ ಪ್ರಾದೇಶಿಕ ಆಯುಕ್ತರ ಕಚೇರಿಯನ್ನು ರದ್ದುಪಡಿಸಬಾರದು ಎಂದು ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದು, ಪ್ರಾದೇಶಿಕ ಆಯುಕ್ತರ ಕಚೇರಿ ರದ್ದುಪಡಿಸಿದರೆ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಕಚೇರಿ ಕೆಲಸಗಳಿಗಾಗಿ ಬೆಂಗಳೂರಿಗೆ ಹೋಗಿ ಬರಲು ತೊಂದರೆಯಾಗಲಿದೆ ಎಂದು ಹೇಳಿದ್ದಾರೆ.
ಪ್ರಾದೇಶಿಕ ಆಯಕ್ತರ ಕಚೇರಿಯಿಂದ ಈ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಿದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ನೇರವಾಗಿ ಶೀಘ್ರ ತಲುಪಿಸಲು ಸಾಧ್ಯವಾಗಿದೆ. ಆಡಳಿತ ವಿಕೇಂದ್ರೀಕರಣದಲ್ಲೂ ಇದರ ಪಾತ್ರ ದೊಡ್ಡದಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.