ADVERTISEMENT

ಬೀದರ್| ‘ಅಚ್ಚುಕಟ್ಟು ಪ್ರದೇಶಾಭಿವೃದ್ಧಿಯ ಕಚೇರಿ ಸ್ಥಳಾಂತರ ಬೇಡ’

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 16:14 IST
Last Updated 19 ಮಾರ್ಚ್ 2023, 16:14 IST
ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಅನಂತರೆಡ್ಡಿ ಟಿ. ಮಿರ್ಜಾಪೂರ ಅವರು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು
ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಅನಂತರೆಡ್ಡಿ ಟಿ. ಮಿರ್ಜಾಪೂರ ಅವರು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು   

ಬೀದರ್: ಕಲ್ಯಾಣ ಕರ್ನಾಟಕ ಪ್ರದೇಶದ ಅಚ್ಚುಕಟ್ಟು ಪ್ರದೇಶಾಭಿವೃದ್ಧಿಯ ಯಾದಗಿರಿ ಜಿಲ್ಲೆಯ ಹಸನಾಪುರ ವಿಭಾಗೀಯ ಕಚೇರಿ ಮತ್ತು ಭಾತಂಭ್ರಾ ಉಪ ವಿಭಾಗೀಯ ಕಚೇರಿಗಳನ್ನು ಬಾಗಲಕೋಟೆಗೆ ಸ್ಧಳಾಂತರ ಮಾಡಿರುವುದನ್ನು ತಕ್ಷಣ ರದ್ದುಪಡಿಸಬೇಕು ಎಂದು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಒತ್ತಾಯಿಸಿದೆ.

ಬಾಗಲಕೋಟೆಗೆ ಸ್ಥಳಾಂತರ ಮಾಡಿದರೆ ಕಲ್ಯಾಣ ಕರ್ನಾಟಕದ ಜನತೆಗೆ 371ನೇ(ಜೆ) ಅಡಿಯಲ್ಲಿ ಲಾಭ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ನೇಮಕಾತಿಯಲ್ಲೂ ಅನ್ಯಾಯವಾಗಲಿದೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಸಮಿತಿ ಜಿಲ್ಲಾ ಘಟಕದ ಅನಂತರೆಡ್ಡಿ ಟಿ. ಮಿರ್ಜಾಪೂರ ತಿಳಿಸಿದ್ದಾರೆ.

ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಹಾಗೂ ಈ ಭಾಗದ ಹುದ್ದೆಗಳನ್ನು ಉಳಿಸಿಕೊಳ್ಳಲು ಸರ್ಕಾರ ಕಚೇರಿಗಳ ಸ್ಥಳಾಂತರ ಆದೇಶ ರದ್ದುಪಡಿಸಬೇಕು. ಈಗಿರುವ ಸ್ಥಳಗಳಲ್ಲೇ ಮುಂದವರಿಸಬೇಕು ಎಂದು ಅನಂತರೆಡ್ಡಿ ಟಿ. ಮಿರ್ಜಾಪೂರ ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.