ಬಗದಲ್(ಜನವಾಡ): ನಾಯಿಯೊಂದು ಬಾಲಕಿ ಮುಖಕ್ಕೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಬೀದರ್ ತಾಲ್ಲೂಕಿನ ಬಗದಲ್ ಗ್ರಾಮದಲ್ಲಿ ಶನಿವಾರ ನಡೆದಿದೆ. ಗ್ರಾಮದ ಆರು ವರ್ಷದ ಬಾಲಕಿ ಸ್ನೇಹಾ ಲಕ್ಷ್ಮಣ ತುಟಿ, ಗಲ್ಲ, ಕಣ್ಣಿನ ಕೆಳಭಾಗ, ಹುಬ್ಬಿಗೆ ತೀವ್ರ ಗಾಯಗಳಾಗಿದ್ದು, ಅನೇಕ ಹೊಲಿಗೆಗಳು ಬಿದ್ದಿವೆ.
ನಾಯಿ ಶುಕ್ರವಾರ ಗ್ರಾಮದ ಇನ್ನೂ ಇಬ್ಬರಿಗೆ ಕಚ್ಚಿ ಗಾಯಗೊಳಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಸ್ನೇಹಾ ತಂದೆ ಮಗಳಿಗೆ ಬೀದರ್ ನಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಬಾಲಕಿಗೆ ನಾಯಿ ಕಡಿತಕ್ಕೆ ಸಂಬಂಧಿಸಿದಂತೆ ಆಯೋಗದಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗೆ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.