ADVERTISEMENT

ಡೋನೇಶನ್ ಹಾವಳಿ: ಕ್ರಮಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 14:10 IST
Last Updated 16 ಫೆಬ್ರುವರಿ 2021, 14:10 IST
ಡೊನೇಶನ್ ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬೀದರ್‍ನಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು
ಡೊನೇಶನ್ ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬೀದರ್‍ನಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು   

ಬೀದರ್: ಮಕ್ಕಳ ಪಾಲಕರಿಂದ ಬೇಕಾಬಿಟ್ಟಿ ಡೋನೇಶನ್ ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿವಿಧ ಸಂಘಟನೆಗಳು ಒತ್ತಾಯಿಸಿವೆ.

ಸಂಘಟನೆಗಳ ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ನಿಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿದರು.

ನಿಯಮ ಗಾಳಿಗೆ ತೂರಿ ಡೋನೇಶನ್ ರೂಪದಲ್ಲಿ ಶುಲ್ಕ ಪಡೆಯುತ್ತಿರುವ ಶಾಲೆಗಳ ಪರವಾನಗಿ ರದ್ದುಪಡಿಸಬೇಕು.
ಆರ್‍ಟಿಇ ಅಡಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 10 ನೇ ತರಗತಿ ವರೆಗೆ ಉಚಿತ ಶಿಕ್ಷಣ ಮುಂದುವರಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಡಿಎಸ್-4 ಕರ್ನಾಟಕದ ರಾಜ್ಯ ಘಟಕದ ಉಪಾಧ್ಯಕ್ಷ ರಾಜಕುಮಾರ ಮೂಲಭಾರತಿ, ಅಂಬೇಡ್ಕರ್ ಯುವ ಸೇನೆ ರಾಜ್ಯ ಘಟಕದ ಅಧ್ಯಕ್ಷ ಚಂದ್ರಕಾಂತ ನಿರಾಟೆ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಉಮೇಶಕುಮಾರ ಸ್ವಾರಳ್ಳಿಕರ್, ನರಸಿಂಗ್ ಸಾಮ್ರಾಟ್, ದಲಿತ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಸಂದೀಪ ಕಾಂಟೆ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಓಂಪ್ರಕಾಶ ಭಾವಿಕಟ್ಟಿ, ಭೋವಿ ವಡ್ಡರ ಸಮಾಜ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ ಏಣಕೂರೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮ ಮಾರ್ಗ) ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಚಿಟ್ಟಾ, ವಿದ್ಯಾರ್ಥಿ ಒಕ್ಕೂಟದ ತಾಲ್ಲೂಕು ಸಂಚಾಲಕ ಜೈಭೀಮ ಶರ್ಮಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.