ಶಹಾಪುರ: ‘ಅದ್ದೂರಿ ಮದುವೆಗಾಗಿ ಸಾಲ ಮಾಡುವುದು ಸರಿಯಲ್ಲ. ದುಂದು ವೆಚ್ಚ ಮಾಡಿ ಬಡ ಮತ್ತು ಮಾಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಬಾರದು ಎಂಬ ಸದುದ್ದೇಶದಿಂದ 2013ರಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೋತ್ಸಾಹ ಧನ ನೀಡುವ ಯೋಜನೆಯನ್ನು ಆರಂಭಿಸಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.
ತಾಲ್ಲೂಕಿನ ಭೀಮರಾಯನಗುಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೋ.ಬಿ ಕೃಷ್ಣಪ್ಪ ಸ್ಥಾಪಿತ ಸಂಘಟನೆ )ವತಿಯಿಂದ ಬುದ್ಧ, ಬಸವ, ಅಂಬೇಡ್ಕರ್ ಜಯಂತ್ಯುತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದಲಿತ ಸಂಘರ್ಷ ಸಮಿತಿ ವತಿಯಿಂದ ಹಲವು ವರ್ಷದಿಂದ ಸಾಮೂಹಿಕ ವಿವಾಹ ಸಮಾರಂಭಗಳನ್ನು ನೆರವೇರಿಸಿಕೊಂಡು ಬರುತ್ತಿರುವುದು ಉತ್ತಮ ನಾಗರಿಕ ಸಮಾಜದ ಲಕ್ಷಣವಾಗಿದೆ. ಆಧುನಿಕ ಯುಗದಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವವಿದ್ದು, ಎಷ್ಟೇ ಕಷ್ಟಗಳಿದ್ದರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ ಎಂದರು.
ಇದೇ ಸಂದರ್ಭದಲ್ಲಿ 10 ಜೋಡಿಗಳು ಕಂಕಣ ಭಾಗ್ಯ ಪಡೆದರು.
ಸಾರಿಪುತ್ರ ಬುದ್ಧ ವಿಹಾರದ ಭಂತೆ ಮೆತ್ತಪಾಲ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಕಾರ್ಯದದರ್ಶಿ ಹೊನ್ನಪ್ಪ ಗಂಗನಾಳ,ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಆರ್.ಚನ್ನಬಸ್ಸು ವನದುರ್ಗ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವುಮಾಹಂತಪ್ಪ ಸಾಹು, ತಿಮ್ಮಯ್ಯ ಪುರ್ಲೆ, ಮಲ್ಲಿಕಾರ್ಜುನ ಪೂಜಾರಿ, ಮಲ್ಲಪ್ಪ ಉಳ್ಳಂಡಗೇರಿ. ಪರಿಶಿಷ್ಟ ನೌಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಶೈಲ್ ಹೊಸ್ಮನಿ,ರಾಮು ಸಗರ,ಶ್ರೀಶೈಲ್ ಪೂಜಾರಿ, ಸುಭಾಷ್ ತಳವಾರ, ಸಿದ್ದಣ್ಣ ತಣಕೆದಾರ, ಶಿವುಕುಮಾರ ತಳವಾರ, ಚಂದ್ರಶೇಖರ ಯಾದವ, ಸಾಯಿಬಣ್ಣ ಪುರ್ಲೆ, ಭೀಮರಾಯ ತಳವಾರ, ನಾಗಣ್ಣ ಬಡಿಗೇರ ,ಚಂದ್ರಶೇಖರ ಗುತ್ತೇದಾರ, ಲಕ್ಷ್ಮಣ ಗೋಗಿ, ಶರಣಗೌಡ ಪಾಟೀಲ, ಮಲ್ಲಿಕಾರ್ಜುನ ಪಾಟೀಲ, ಚಂದ್ರಶೇಖರ,ಗಿರಿಜಾ ತಳವಾರ,ರಮೇಶ ಬಿರನೂರ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.