ADVERTISEMENT

ವರದಕ್ಷಿಣೆ ಕೊಡುವುದೂ ಅಪರಾಧ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಹೇಳಿಕೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2020, 15:45 IST
Last Updated 1 ಡಿಸೆಂಬರ್ 2020, 15:45 IST
ಬೀದರ್‌ನ ಶಾಹೀನ್‌ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರೀಯ ಐಕ್ಯತಾ ದಿನಾಚರಣೆ ಪ್ರಯುಕ್ತ ನಡೆದ ವರದಕ್ಷಿಣೆ ನಿಷೇಧ ದಿನಾಚರಣೆ, ರಾಷ್ಟ್ರೀಯ ಐಕ್ಯತಾ ಸಪ್ತಾಹ, ಭಾರತ ಸಂವಿಧಾನ ಅಂಗೀಕಾರ ದಿನಾಚರಣೆಗಳ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಉದ್ಘಾಟಿಸಿದರು
ಬೀದರ್‌ನ ಶಾಹೀನ್‌ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರೀಯ ಐಕ್ಯತಾ ದಿನಾಚರಣೆ ಪ್ರಯುಕ್ತ ನಡೆದ ವರದಕ್ಷಿಣೆ ನಿಷೇಧ ದಿನಾಚರಣೆ, ರಾಷ್ಟ್ರೀಯ ಐಕ್ಯತಾ ಸಪ್ತಾಹ, ಭಾರತ ಸಂವಿಧಾನ ಅಂಗೀಕಾರ ದಿನಾಚರಣೆಗಳ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಉದ್ಘಾಟಿಸಿದರು   

ಬೀದರ್‌: ‘ವರದಕ್ಷಿಣೆ ಕೊಡುವುದು ಹಾಗೂ ಪಡೆಯುವುದು ಕಾನೂನಿಗೆ ವಿರುದ್ಧವಾಗಿದೆ. ಮಹಿಳೆಯರು ವರದಕ್ಷಿಣೆ ಕಿರುಕುಳಕ್ಕೆ ಒಳಗಾದರೆ ಮಹಿಳೆ ಮತ್ತು ಅವಳ ಕುಟುಂಬದವರು ಕಾನೂನಿನ ಮೊರೆ ಹೋಗಬೇಕು. ನ್ಯಾಯ ಸಿಗುವವರೆಗೂ ತಾಳ್ಮೆಯಿಂದಿರಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಹೇಳಿದರು.

ನಗರದ ಶಹಾಪುರ ಗೇಟ್ ಹತ್ತಿರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹ ಸಂಸ್ಥೆಯ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ವರದಕ್ಷಿಣೆ ನಿಷೇಧ ದಿನಾಚರಣೆ, ರಾಷ್ಟ್ರೀಯ ಐಕ್ಯತಾ ಸಪ್ತಾಹ, ಭಾರತ ಸಂವಿಧಾನ ಅಂಗೀಕಾರ ದಿನಾಚರಣೆಗಳ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ಬಿ.ಎನ್.ಶಶಿಕಲಾ ಮಾತನಾಡಿ, ‘ವರದಕ್ಷಿಣೆ ನಿಷೇಧ ಕಾಯ್ದೆ ಮತ್ತು ವರದಕ್ಷಿಣೆ ಕಿರುಕುಳದಿಂದಾಗಿ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಪ್ರತಿಯೊಬ್ಬರು ಅರಿತುಕೊಳ್ಳಬೇಕು. ನ್ಯಾಯಕ್ಕಾಗಿ ಪೊಲೀಸ್ ಠಾಣೆ ಹಾಗೂ ಕೋರ್ಟ್‌ನ ಮೆಟ್ಟಿಲು ಹತ್ತಿದಾಗ ಎದುರಿಸಬೇಕಾದ ಸವಾಲುಗಳನ್ನೂ ತಿಳಿದುಕೊಳ್ಳಬೇಕು’ ಎಂದರು.

ADVERTISEMENT

ಮಾರ್ಕೆಟ್‌ ಸಿಪಿಐ ಮಲ್ಲಮ್ಮ ಚೌಬೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ತಿಪ್ಪಣ್ಣ ಸಿರಸಗಿ, ಎಂ.ಎಸ್ ಶಿರೋಮಣಿ ಮಾತನಾಡಿದರು.

ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್ ಅಧ್ಯಕ್ಷತೆ ವಹಿಸಿದ್ದರು. ಸೀಮಂಡ್ಸ್ ಮೆಮೊರಿಯಲ್ ಎಜುಕೇಶನ್ ಸೊಸೈಟಿ ಫಾರ್ ರೂರಲ್ ಡೆವಲಪ್‌ಮೆಂಟ್‌ನ ಪದಾಧಿಕಾರಿಗಳು ಇದ್ದರು.

ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ್ ಪರತಾಪುರೆ ಹಾಗೂ ಬೀದರ್ ಮಹಿಳಾ ಶಕ್ತಿ ಕೇಂದ್ರದ ಜಿಲ್ಲಾ ಸಂಯೋಜಕ ಶಾಲಿನಿ ಫ್ಲಾರೆನ್ಸ್ ನಿರೂಪಿಸಿದರು. ಯು.ಪಿ.ಎಸ್.ಸಿ ವಿದ್ಯಾರ್ಥಿ ಇಮ್ತಿಯಾಜ್ ಸ್ವಾಗತಿಸಿದರು. ಮಹಿಳಾ ಶಕ್ತಿ ಕೇಂದ್ರದ ಜಿಲ್ಲಾ ಸಂಯೋಜಕಿ ಗೀತಾಂಜಲಿ ವಂದಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ, ಮಹಿಳಾ ಶಕ್ತಿ ಕೇಂದ್ರ, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹ ಸಂಸ್ಥೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.