ADVERTISEMENT

ಡಾ. ಅಂಬೇಡ್ಕರ್ ಅಪ್ರತಿಮ ಚಿಂತಕ

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 16:03 IST
Last Updated 11 ಜನವರಿ 2021, 16:03 IST
ಬೀದರ್‌ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆದ ಡಾ. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ ಸಸಿಗೆ ನೀರೆರೆದು ಉದ್ಘಾಟಿಸಿದರು
ಬೀದರ್‌ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆದ ಡಾ. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ ಸಸಿಗೆ ನೀರೆರೆದು ಉದ್ಘಾಟಿಸಿದರು   

ಬೀದರ್: ಡಾ. ಅಂಬೇಡ್ಕರ್ ಅವರು ಅಪ್ರತಿಮ ಚಿಂತಕ ಹಾಗೂ ದಾರ್ಶನಿಕರಾಗಿದ್ದರು ಎಂದು ಕರ್ನಾಟಕ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಬಸವರಾಜ ಬಲ್ಲೂರ ಹೇಳಿದರು.

ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆದ ಡಾ. ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಡಾ. ಅಂಬೇಡ್ಕರ್ ಅವರ ಜೀವನ ಹಾಗೂ ಸಾಧನೆಗಳನ್ನು ಮನೆ ಮನೆಗೂ ಪರಿಚಯಿಸಲು ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಸುತ್ತಿರುವುದು ಉತ್ತಮ ಹೆಜ್ಜೆಯಾಗಿದೆ ಎಂದು ಹೇಳಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯ ಶಿವಶಂಕರ ಟೋಕರೆ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ವಿಜಯಕುಮಾರ ಗೌರೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.