ADVERTISEMENT

ಡಾ. ರಜನೀಶ್ ವಾಲಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 15:23 IST
Last Updated 18 ಏಪ್ರಿಲ್ 2021, 15:23 IST
ಬೀದರ್‌ನ ಬಿ.ವಿ. ಭೂಮರಡ್ಡಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ನೂತನ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ ವಾಲಿ ಅವರನ್ನು ಸನ್ಮಾನಿಸಲಾಯಿತು
ಬೀದರ್‌ನ ಬಿ.ವಿ. ಭೂಮರಡ್ಡಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ನೂತನ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ ವಾಲಿ ಅವರನ್ನು ಸನ್ಮಾನಿಸಲಾಯಿತು   

ಬೀದರ್: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ನೂತನ ಆಡಳಿತ ಮಂಡಳಿ ಸದಸ್ಯರಾಗಿ ಆಯ್ಕೆಯಾದ ಡಾ. ರಜನೀಶ್ ವಾಲಿ ಅವರನ್ನು ಇಲ್ಲಿಯ ಬಿ.ವಿ. ಭೂಮರಡ್ಡಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನಲ್ಲಿ ಸನ್ಮಾನಿಸಲಾಯಿತು.

ತಮ್ಮ ಅಧಿಕಾರ ಅವಧಿಯಲ್ಲಿ ಸಂಸ್ಥೆಯ ಏಳಿಗೆಗೆ ಶ್ರಮಿಸಲಾಗುವುದು ಎಂದು ಡಾ. ರಜನೀಶ್ ವಾಲಿ ತಿಳಿಸಿದರು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್.ಕೆ. ಸಾತನೂರ, ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಕನಕಟ್ಟೆ, ಬಾಬುರಾವ್ ದಾನಿ ಉಪಸ್ಥಿತರಿದ್ದರು.

ADVERTISEMENT

ಶೈಲಜಾ ಸಿದ್ದವೀರ ನಿರೂಪಿಸಿದರು. ಪ್ರಾಚಾರ್ಯ ಅನಿಲಕುಮಾರ ಆಣದೂರೆ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.