ADVERTISEMENT

ಜನವಾಡ: ಬಿತ್ತನೆ ಬೀಜ ವಿತರಣೆಗೆ ಚಾಲನೆ

ರೈತರಿಗೆ ಗುಣಮಟ್ಟದ ಬೀಜ ವಿತರಿಸಿ: ಶಾಸಕ ಕಾಶೆಂಪೂರ್

​ಪ್ರಜಾವಾಣಿ ವಾರ್ತೆ
Published 3 ಜೂನ್ 2021, 17:10 IST
Last Updated 3 ಜೂನ್ 2021, 17:10 IST
ಬೀದರ್ ತಾಲ್ಲೂಕಿನ ಮನ್ನಳ್ಳಿಯಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆಗೆ ಶಾಸಕ ಬಂಡೆಪ್ಪ ಕಾಶೆಂಪೂರ್ ಗುರುವಾರ ಚಾಲನೆ ನೀಡಿದರು. ಕೃಷಿ ಜಂಟಿ ನಿರ್ದೇಶಕಿ ತಾರಾಮಣಿ ಇದ್ದರು
ಬೀದರ್ ತಾಲ್ಲೂಕಿನ ಮನ್ನಳ್ಳಿಯಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆಗೆ ಶಾಸಕ ಬಂಡೆಪ್ಪ ಕಾಶೆಂಪೂರ್ ಗುರುವಾರ ಚಾಲನೆ ನೀಡಿದರು. ಕೃಷಿ ಜಂಟಿ ನಿರ್ದೇಶಕಿ ತಾರಾಮಣಿ ಇದ್ದರು   

ಜನವಾಡ: ರಿಯಾಯಿತಿ ದರದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆಗೆ ಬೀದರ್ ತಾಲ್ಲೂಕಿನ ಕಮಠಾಣ ಹಾಗೂ ಮನ್ನಳ್ಳಿ ಗ್ರಾಮಗಳ ರೈತ ಸಂಪರ್ಕ ಕೇಂದ್ರಗಳಲ್ಲಿ ಶಾಸಕ ಬಂಡೆಪ್ಪ ಕಾಶೆಂಪೂರ್ ಗುರುವಾರ ಚಾಲನೆ ನೀಡಿದರು.

ರೈತರಿಗೆ ಗುಣಮಟ್ಟದ ಬೀಜ ವಿತರಿಸಬೇಕು. ಸೋಯಾಬೀನ್ ಸೇರಿದಂತೆ ಯಾವುದೇ ಬೀಜದ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಕೋವಿಡ್ ಕಾರಣ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಒಂದೊಂದು ಊರಿನ ರೈತರಿಗೆ ಒಂದೊಂದು ಸಮಯ ನಿಗದಿ ಮಾಡಿ ಬೀಜ ವಿತರಿಸಬೇಕು ಎಂದು ತಿಳಿಸಿದರು.

ADVERTISEMENT

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ, ಬೀದರ್ ಸಹಾಯಕ ಕೃಷಿ ನಿರ್ದೇಶಕ ಧೂಳಪ್ಪ ಎಚ್, ಕೃಷಿ ಅಧಿಕಾರಿಗಳಾದ ಜಮಿರೊದ್ದಿನ್, ವಿಜಯಕುಮಾರ ಸಿರಂಜೆ ಇದ್ದರು.

‘ಬಿತ್ತನೆ ಬೀಜ ಖರೀದಿಗೆ ಪಹಣಿ ಕಡ್ಡಾಯವಲ್ಲ’
‘ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಖರೀದಿಗೆ ಪಹಣಿ ಕಡ್ಡಾಯವಲ್ಲ’ ಎಂದು ಶಾಸಕ ಬಂಡೆಪ್ಪ ಕಾಶೆಂಪೂರ್ ತಿಳಿಸಿದರು.

‘ಬೀಜ ಖರೀದಿಗೆ ಪಹಣಿ ಬೇಕೇ ಬೇಕು ಎಂದು ಕೃಷಿ ಅಧಿಕಾರಿಗಳು ಹೇಳುತ್ತಿದ್ದಾರೆ’ ಎಂದು ರೈತರೊಬ್ಬರು ಗಮನ ಸೆಳೆದಾಗ, ಕಾಶೆಂಪೂರ್ ಸ್ಥಳದಲ್ಲೇ ಮೊಬೈಲ್‍ನಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ ಅವರನ್ನು ಸಂಪರ್ಕಿಸಿ, ಸ್ಪಷ್ಟೀಕರಣ ಬಯಸಿದರು.

‘ಬೀಜಕ್ಕೆ ಪಹಣಿ ಕಡ್ಡಾಯ ಮಾಡಿಲ್ಲ. ರೈತರು ಆಧಾರ್ ಕಾರ್ಡ್ ಅಥವಾ ಯಾವುದಾದರೊಂದು ಗುರುತಿನ ಚೀಟಿ ತೋರಿಸಿ ಬೀಜ ಪಡೆಯಬಹುದು’ ಎಂದು ಪಾಟೀಲ ತಿಳಿಸಿದರು.

‘ಬಳಿಕ ಕೃಷಿ ಇಲಾಖೆ ಆಯುಕ್ತರ ಕಚೇರಿ ಅಧಿಕಾರಿಗಳು ಶಾಸಕರನ್ನು ಸಂಪರ್ಕಿಸಿದರು. ಬೀಜ ಖರೀದಿಗೆ ಪಹಣಿ ಕಡ್ಡಾಯಗೊಳಿಸಿಲ್ಲ. ಯಾವುದಾದರೊಂದು ಗುರುತಿನ ಚೀಟಿ ಪಡೆದು ಬೀಜ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ’ ಎಂದು ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.