ADVERTISEMENT

ಉಚಿತ ಬೇಸಿಗೆ ಶಿಬಿರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 13:05 IST
Last Updated 13 ಏಪ್ರಿಲ್ 2022, 13:05 IST
ಬೀದರ್‌ನ ಕೋರ್ ವಿಜ್ಞಾನ ಚಟುವಟಿಕೆ ಕೇಂದ್ರದಲ್ಲಿ ಉಚಿತ ಬೇಸಿಗೆ ಶಿಬಿರಕ್ಕೆ ಮಕ್ಕಳಿಂದಲೇ ಚಾಲನೆ ನೀಡಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ ಬಾರಾಟಕೆ, ಗುಂಡಪ್ಪ ಹುಡಗೆ, ಬಿ.ಕೆ. ದಿಗಂಬರ, ಬಾಬುರಾವ್ ಎನ್.ಎಸ್ ಇದ್ದರು
ಬೀದರ್‌ನ ಕೋರ್ ವಿಜ್ಞಾನ ಚಟುವಟಿಕೆ ಕೇಂದ್ರದಲ್ಲಿ ಉಚಿತ ಬೇಸಿಗೆ ಶಿಬಿರಕ್ಕೆ ಮಕ್ಕಳಿಂದಲೇ ಚಾಲನೆ ನೀಡಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ ಬಾರಾಟಕೆ, ಗುಂಡಪ್ಪ ಹುಡಗೆ, ಬಿ.ಕೆ. ದಿಗಂಬರ, ಬಾಬುರಾವ್ ಎನ್.ಎಸ್ ಇದ್ದರು   

ಬೀದರ್: ನಗರದ ಕೋರ್ ವಿಜ್ಞಾನ ಚಟುವಟಿಕೆ ಕೇಂದ್ರದಲ್ಲಿ ಉಚಿತ ಬೇಸಿಗೆ ಶಿಬಿರಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ ಬಾರಾಟಕೆ ಮಂಗಳವಾರ ಚಾಲನೆ ನೀಡಿದರು.

ಶಿಬಿರವು ಮಕ್ಕಳ ವೈಜ್ಞಾನಿಕ ಮನೋಭಾವ ವೃದ್ಧಿ ಹಾಗೂ ಗುಣಮಟ್ಟದ ಕಲಿಕೆಗೆ ನೆರವಾಗಲಿದೆ ಎಂದು ಅವರು ಹೇಳಿದರು.

ಮಕ್ಕಳಲ್ಲಿ ಸೃಜನಶೀಲತೆ, ವೈಜ್ಞಾನಿಕ ಮನೋಭಾವ ಬೆಳೆಸುವ ದಿಸೆಯಲ್ಲಿ ಪ್ರತಿ ವರ್ಷ ಬೇಸಿಗೆಯಲ್ಲಿ ಉಚಿತ ಶಿಬಿರ ಆಯೋಜಿಸಲಾಗುತ್ತಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯನ್ನೂ ನಡೆಸಲಾಗುವುದು ಎಂದು ಕೋರ್ ವಿಜ್ಞಾನ ಚಟುವಟಿಕೆ ಕೇಂದ್ರದ ಮುಖ್ಯಸ್ಥ ಬಾಬುರಾವ್ ಎನ್.ಎಸ್. ತಿಳಿಸಿದರು.

ADVERTISEMENT

ಡಯಟ್ ಪ್ರಾಚಾರ್ಯ ಬಿ.ಕೆ. ದಿಗಂಬರ, ಉಪನ್ಯಾಸಕ ಸಂತೋಷ ಪೂಜಾರಿ, ಹುಡಗೆ ಗುಂಡಪ್ಪ ಉಪಸ್ಥಿತರಿದ್ದರು. ವಿರಾಜ್ ವಿಶ್ವಕರ್ಮ ನಿರೂಪಿಸಿದರು. ವಿಶಾಲ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.