ADVERTISEMENT

ಮಾದಕ ವಸ್ತುಗಳಿಂದ ದೂರವಿರಿ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2019, 15:49 IST
Last Updated 15 ಅಕ್ಟೋಬರ್ 2019, 15:49 IST
ಬೀದರ್‌ನ ಝೀರಾ ಫಂಕ್ಷನ್ ಹಾಲ್‌ನಲ್ಲಿ ಮಂಗಳವಾರ ನಡೆದ ಮಾದಕ ಔಷಧ/ಮದ್ದು ದುರ್ಬಳಕೆಗೆ ಬಲಿಯಾದವರಿಗೆ ಕಾನೂನು ಸೇವೆಗಳು ಮತ್ತು ಮಾದಕ ಔಷಧ ವಿಪತ್ತಿನ ನಿರ್ಮೂಲನೆ ಯೋಜನೆ 2015ರ ಕುರಿತ ವಿಚಾರ ಸಂಕಿರಣವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಪ್ರೇಮಾವತಿ ಮನಗೂಳಿ ಉದ್ಘಾಟಿಸಿದರು
ಬೀದರ್‌ನ ಝೀರಾ ಫಂಕ್ಷನ್ ಹಾಲ್‌ನಲ್ಲಿ ಮಂಗಳವಾರ ನಡೆದ ಮಾದಕ ಔಷಧ/ಮದ್ದು ದುರ್ಬಳಕೆಗೆ ಬಲಿಯಾದವರಿಗೆ ಕಾನೂನು ಸೇವೆಗಳು ಮತ್ತು ಮಾದಕ ಔಷಧ ವಿಪತ್ತಿನ ನಿರ್ಮೂಲನೆ ಯೋಜನೆ 2015ರ ಕುರಿತ ವಿಚಾರ ಸಂಕಿರಣವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಪ್ರೇಮಾವತಿ ಮನಗೂಳಿ ಉದ್ಘಾಟಿಸಿದರು   

ಬೀದರ್: ‘ಭವಿಷ್ಯ ಹಾಳು ಮಾಡುವ ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ದೂರ ಇರಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಪ್ರೇಮಾವತಿ ಮನಗೂಳಿ ಸಲಹೆ ಮಾಡಿದರು.

ನಗರದ ಝೀರಾ ಫಂಕ್ಷನ್ ಹಾಲ್‌ನಲ್ಲಿ ಮಂಗಳವಾರ ನಡೆದ ‘ಮಾದಕ ಔಷಧ/ಮದ್ದು ದುರ್ಬಳಕೆಗೆ ಬಲಿಯಾದವರಿಗೆ ಕಾನೂನು ಸೇವೆಗಳು ಮತ್ತು ಮಾದಕ ಔಷಧ ವಿಪತ್ತಿನ ನಿರ್ಮೂಲನೆ ಯೋಜನೆ 2015ರ ಕುರಿತ ವಿಚಾರ ಸಂಕಿರಣ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಶಾಲಾ- ಕಾಲೇಜುಗಳಲ್ಲಿ ಮಾದಕ ವಸ್ತುಗಳ ಹಾವಳಿ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ಮಾದಕ ವಸ್ತುಗಳ ಬಳಕೆಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ’ ಎಂದು ಹೇಳಿದರು.

ADVERTISEMENT

ಡಿವೈಎಸ್‌ಪಿ ಬಸವೇಶ್ವರ ಹೀರಾ ಮಾತನಾಡಿದರು. ಗುರುನಾನಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ರೇಷ್ಮಾ ಕೌರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಗದೀಶ ಜಗತಾಪ, ಸಹಾಯಕ ಡ್ರಗ್ಸ್ ನಿಯಂತ್ರಣಾಧಿಕಾರಿ ಶರಣಬಸಪ್ಪ ಹನುಮನಾಳ, ಪ್ರೇರಣಾ ಭಾಷಣಕಾರ ಡಾ.ಪೃಥ್ವಿರಾಜ್ ಲಕ್ಕಿ, ಗುರುನಾನಕ ಪಿಯು ಕಾಲೇಜು ಪ್ರಾಂಶುಪಾಲೆ ಆಶಾ, ಕಾಲೇಜಿನ ಜಯಪ್ರಕಾಶ, ಜೋಸೆಫ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.